ಪೊಲೀಸರು ಈ ಪ್ರಕರಣವನ್ನು ಬೇಧಿಸಿ ಆರೋಪಿಯನ್ನು ಪತ್ತೆ ಮಾಡಿದ್ದರು. ಆದರೆ ಆರೋಪಿ ಪೊಲೀಸರ ಎನ್‌ಕೌಂಟರ್‌ನಿಂದ ಬಲಿಯಾಗಿದ್ದಾನೆ ಎಂದು ವರದಿಯಾಗಿದೆ. ಆರೋಪಿಯನ್ನು ರಕ್ಷಿತ್ ಕಾಂತಿ ಎಂದು ಗುರುತಿಸಲಾಗಿದ್ದು, ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ.
ಹುಬ್ಬಳ್ಳಿ: ರಾಜ್ಯದಲ್ಲಿ ಇಂದು (ಏಪ್ರಿಲ್ 13) ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿತ್ತು. ಹುಬ್ಬಳ್ಳಿ (Hubballi) ನಗರದ ಅಧ್ಯಾಪಕ ನಗರದಲ್ಲಿ ಐದು ವರ್ಷದ ಬಾಲಕಿಯೊಬ್ಬಳನ್ನು ಅಪಹರಿಸಿ (Girl Murder) ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿತ್ತು. ಬಿಹಾರ (Bihar) ಮೂಲದ ಯುವಕನೊಬ್ಬ ಈ ಕೃತ್ಯ ಎಸಗಿರೋದಾಗಿ ವರದಿಯಾಗಿತ್ತು.
ಅಲ್ಲದೇ ಘಟನೆ ಬೆಳಕಿಗೆ ಬರುತ್ತಿದ್ದಂತೆ ಜಿಲ್ಲೆಯಲ್ಲಿ ಭಾರೀ ಆಕ್ರೋಶವ್ಯಕ್ತವಾಗಿತ್ತು. ಇದೀಗ ಪೊಲೀಸರು ಈ ಪ್ರಕರಣವನ್ನು ಬೇಧಿಸಿ ಆರೋಪಿಯನ್ನು ಪತ್ತೆ ಮಾಡಿದ್ದರು. ಆದರೆ ಆರೋಪಿ ಪೊಲೀಸರ ಎನ್‌ಕೌಂಟರ್‌ನಿಂದ (Police Encounter) ಬಲಿಯಾಗಿದ್ದಾನೆ ಎಂದು ವರದಿಯಾಗಿದೆ. ಆರೋಪಿಯನ್ನು ರಕ್ಷಿತ್ ಕಾಂತಿ (Rakshith Kanti)ಎಂದು ಗುರುತಿಸಲಾಗಿದ್ದು, ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ.
ಗುಂಡೇಟಿಗೆ ಪಾಪಿ ಬಲಿ!
ಅತ್ತ ಬಾಲಕಿಯ ಸಾವಿನ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ಹುಬ್ಬಳ್ಳಿಯಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೇ ಅಶೋಕನಗರ ಪೊಲೀಸದ ಠಾಣೆ ಮುಂದೆ, ಆಸ್ಪತ್ರೆ ಮುಂದೆ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ನೀಡೋಕು, ಗಲ್ಲು ಶಿಕ್ಷೆಗೆ ಒಳಪಡಿಸಬೇಕು ಎಂದು ಜನರು ಆಗ್ರಹಿಸಿದ್ದರು.
ದೌರ್ಜನ್ಯ
ಇನ್ನು ಬಾಲಕಿಯನ್ನು ಕೊಲೆ ಮಾಡಿದ್ದು ಬಿಹಾರ ಮೂಲದ ಸೈಕೋಪಾಥ್ ಎಂದು ಹೇಳಲಾಗಿತ್ತು. ಆದ್ರೆ ಯಾರೆಂದು ಮಾಹಿತಿ ಲಭ್ಯವಾಗಿರಲಿಲ್ಲ. ಆದ್ರೆ ಪ್ರಕರಣ ಬೆಳಕಿಗೆ ಬಂದ ಕೆಲವೇ ಘಂಟೆಗಳಲ್ಲಿ ಹುಬ್ಬಳ್ಳಿ ಪೊಲೀಸರು ಬೇಧಿಸಿ ಆರೋಪಿಯನ್ನು ಬಂಧಿಸಲು ಮುಂದಾಗಿದ್ದರಂತೆ. ಆದ್ರೆ ಈ ವೇಳೆ ಪಾಪಿ ಪೊಲೀಸರ ಮೇಲೆಯೇ ಅಟ್ಯಾಕ್ ಮಾಡಿದ್ದಾನೆ ಎನ್ನಲಾಗಿದೆ. ಈ ವೇಳೆ ಆತ್ಮರಕ್ಷಣೆಗೆ ಪೊಲೀಸರು ಆತನ ಮೇಲೆ ಗುಂಡು ಹಾರಿಸಿದ್ದಾರೆ. ಗಂಭೀರ ಗಾಯಗೊಂಡ ಆರೋಪಿ ರಕ್ಷಿತ್ ಕಾಂತಿ ಎನ್‌ಕೌಂಟರ್‌ನಿಂದ ಬಲಿಯಾಗಿದ್ದಾನೆ.
ಎದೆಹೊಕ್ಕ ಪೊಲೀಸರ ಗುಂಡು
ಪೊಲೀಸರ ಮೇಲೆಯೇ ಕೊಲೆಗಾರ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾನೆ ಎನ್ನಲಾಗಿದ್ದು, ಈ ವೇಳೆ ಪೊಲೀಸರು ಆತ್ಮರಕ್ಷಣೆಗೆ ಗುಂಡು ಹಾರಿಸಿದ್ದಾರೆ. ಈ ವೇಳೆ ಆರೋಪಿಯ ಎದೆ ಸೀಳಿದೆ.
ಏನಿದು ಪ್ರಕರಣ?
ಹುಬ್ಬಳ್ಳಿಯ ಅಧ್ಯಾಪಕ ನಗರದಲ್ಲಿ ವಾಸಿಸುತ್ತಿದ್ದ ಕೊಪ್ಪಳ ಮೂಲದ ಕುಟುಂಬದ ಐದು ವರ್ಷದ ಬಾಲಕಿಯನ್ನ ಕೊಲೆ ಮಾಡಲಾಗಿದೆ. ಈ ಕುಟುಂಬವು ಜೀವನೋಪಾಯಕ್ಕಾಗಿ ಪೇಂಟಿಂಗ್ ಮತ್ತು ಮನೆಗೆಲಸದ ಕೆಲಸಗಳನ್ನು ಮಾಡುತ್ತಿತ್ತು. ಬಾಲಕಿಯ ತಂದೆ ಪೇಂಟಿಂಗ್ ಕೆಲಸದಲ್ಲಿ ತೊಡಗಿದ್ದರೆ, ತಾಯಿ ಮನೆಗೆಲಸಕ್ಕೆ ಹೋಗುತ್ತಿದ್ದರಂತೆ. ಘಟನೆ ನಡೆದ ದಿನದಂದು, ಬಾಲಕಿಯ ತಾಯಿಯು ಮಗುವನ್ನು ಕೆಲಸದ ಸ್ಥಳಕ್ಕೆ ಕರೆದೊಯ್ದಿದ್ದಳಂತೆ. ಈ ಸಂದರ್ಭದಲ್ಲಿ ತಾಯಿ ಮನೆಯೊಳಗೆ ಕೆಲಸದಲ್ಲಿ ಮಗ್ನವಾಗಿದ್ದ ಸಂದರ್ಭದಲ್ಲಿ, ಬಾಲಕಿ ಹೊರಗಡೆ ಆಟವಾಡುತ್ತಿದ್ದಳು.
ಈ ವೇಳೆ, ಯುವಕನೊಬ್ಬ ಬಾಲಕಿಯನ್ನು ಎತ್ತಿಕೊಂಡು ಹೋಗಿರುವ ದೃಶ್ಯವು ಅಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಆರೋಪಿಯು ಬಾಲಕಿಯನ್ನು ತನ್ನೊಂದಿಗೆ ಕರೆದೊಯ್ದು, ಹತ್ತಿರದ ಪಾಳುಬಿದ್ದ ಕೋಣೆಯೊಂದಕ್ಕೆ ಕೊಂಡೊಯ್ದಿದ್ದಾನೆ ಎನ್ನಲಾಗಿದೆ. ನಂತರ, ಅದೇ ಕೋಣೆಯಲ್ಲಿ ಬಾಲಕಿಯ ಶವವು ಪತ್ತೆಯಾಗಿದೆ. ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಬಾಲಕಿಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ದೃಢಪಡಿಸಿದ್ದಾರೆ.
ಆದರೆ, ಕೊಲೆಗೆ ಮುನ್ನ ಅತ್ಯಾಚಾರ ನಡೆದಿದೆಯೇ ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ವೈದ್ಯಕೀಯ ತಪಾಸಣೆಯ ವರದಿಯ ನಂತರ ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯಲ್ಲಿ ಸಿಸಿಟಿವಿ ದೃಶ್ಯಗಳು ಪ್ರಮುಖ ಪುರಾವೆಯಾಗಿ ಪರಿಗಣಿಸಲಾಗಿದೆ. ಆರೋಪಿಯು ಬಾಲಕಿಯನ್ನು ಎತ್ತಿಕೊಂಡು ಹೋಗುವ ದೃಶ್ಯವು ಸ್ಪಷ್ಟವಾಗಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಈ ದೃಶ್ಯಗಳ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಗುರುತಿಸಲು ಮತ್ತು ತನಿಖೆಯನ್ನು ಮುಂದುವರಿಸಲು ಸಾಧ್ಯವಾಗಿದೆ.
ಸಿಸಿಟಿವಿಯ ಈ ದೃಶ್ಯಗಳು ಸಾರ್ವಜನಿಕರಲ್ಲಿ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದ್ದು, ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸುವಂತೆ ಮಾಡಿದ್ದಾರೆ.













































