6 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಸುಳ್ಯದ ಎರಡು ಪ್ರಮುಖ ರಸ್ತೆಗಳಿಗೆ ಗುದ್ದಲಿಪೂಜೆ ನೆರವೇರಿಸಿದ ಸಂಸದ ಕ್ಯಾ. ಚೌಟ

Picture of Savistara

Savistara

Bureau Report

ಸುಳ್ಯ: ಕೇಂದ್ರ ಸರ್ಕಾರದ ರಸ್ತೆ ಹಾಗೂ ಮೂಲಸೌಕರ್ಯ ನಿಧಿ(ಸಿಆರ್ ಐಎಫ್)ಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನ ಸಭಾ ಕ್ಷೇತ್ರದ ಎರಡು ಪ್ರಮುಖ ರಸ್ತೆಗಳನ್ನು ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗಳಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ಇಂದು ಗುದ್ದಲಿಪೂಜೆ ನೆರವೇರಿಸಲಾಯಿತು.ಸಿಆರ್ ಐಎಫ್ ಅನುದಾನದಡಿ ಸುಳ್ಯ ತಾಲೂಕಿನ ನಿಂತಿಕಲ್ಲು- ಬೆಳ್ಳಾರೆ ರಸ್ತೆಯನ್ನು ಸುಮಾರು 3.72 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ.

ಈ ರಸ್ತೆಯಲ್ಲಿ ಒಟ್ಟು ಸುಮಾರು 6.20 ಕಿಮೀ. ಮಾರ್ಗವನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ಕಾಮಗಾರಿಗಳಿಗೆ ಮಂಗಳವಾರ ಸಂಸದ ಕ್ಯಾ. ಚೌಟ ಅವರು ನಿಂತಿಕಲ್ಲು ಜಂಕ್ಷನ್ ನಲ್ಲಿ ಗುದ್ದಲಿಪೂಜೆ ನೆರವೇರಿಸಿದ್ದಾರೆ. ಅದೇ ರೀತಿ ಕೇಂದ್ರ ಸರ್ಕಾರದ ಸಿಆರ್ ಐಎಫ್ ನಿಧಿಯಡಿ ಸುಳ್ಯ-ಪೈಚಾರ್-ಬೆಳ್ಳಾರೆಯ ರಸ್ತೆಯು 2.28 ಕೋಟಿ. ರೂ. ವೆಚ್ಚದಲ್ಲಿ ಅಭಿವೃದ್ಧಿಯಾಗಲಿದೆ. ಈ ರಸ್ತೆಯು ಒಟ್ಟು 3.80 ಕಿ.ಮಿ ಉನ್ನತಿಕರಣಗೊಳ್ಳಲಿದೆ.

ಈ ಹಿನ್ನಲೆಯಲ್ಲಿ ಇಂದು ನಿಂತಿಕಲ್ಲಿನಲ್ಲಿ ಕ್ಯಾ. ಚೌಟ ಅವರ ನೇತೃತ್ವದಲ್ಲಿ ಕಾಮಗಾರಿ ಆರಂಭಿಸುವುದಕ್ಕೆ ಗುದ್ದಲಿಪೂಜೆ ನೆರವೇರಿಸಲಾಗಿದೆ. ನಿಂತಿಕಲ್ಲು ಪುತ್ತೂರು-ಸುಳ್ಯವನ್ನು ಸಂಪರ್ಕಿಸುವ ಗಡಿಭಾಗವಾಗಿದ್ದು, ಸುಳ್ಯ-ಪೈಚಾರ್-ಬೆಳ್ಳಾರೆ- ನಿಂತಿಕಲ್ಲು ರಸ್ತೆ ಅಭಿವೃದ್ಧಿಗೊಂಡರೆ ರಾಜ್ಯ ಹೆದ್ದಾರಿಗಳು ಮತ್ತು ಜಿಲ್ಲಾ ಮುಖ್ಯ ರಸ್ತೆಗಳಿಗೆ ಉತ್ತಮ ಸಂಪರ್ಕವನ್ನು ಒದಗಿಸಿ, ಈ ಪ್ರದೇಶದ ಒಟ್ಟಾರೆ ಸಂಪರ್ಕ ಜಾಲವನ್ನು ಬಲಪಡಿಸುತ್ತದೆ.

ಜೊತೆಗೆ ಪುತ್ತೂರು, ಸುಬ್ರಹ್ಮಣ್ಯ , ಮಂಗಳೂರು, ಮಡಿಕೇರಿ ಸಂಪರ್ಕ ಸಾಧಿಸಲು ಈ ರಸ್ತೆ ಸಹಾಯವಾಗಿದೆ. ಈ ಕಾರ್ಯಕ್ರಮದಲ್ಲಿ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ, ಸುಳ್ಯ ಬಿಜೆಪಿ ಮಂಡಲದ ಅಧ್ಯಕ್ಷ ವೆಂಕಟ್ ವಳಲಂಬೆ, ಪಂಚಾಯತ್ ಅಧ್ಯಕ್ಷರು, ಅಧಿಕಾರಿಗಳು ಬಿಜೆಪಿ ಸ್ಥಳೀಯ ಮುಖಂಡರು ಮತ್ತು ಸ್ಥಳೀಯರು ಕಾರ್ಯಕ್ರಮದ ವೇಳೆ ಉಪಸ್ಥಿತರಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!