1ನೇ ತರಗತಿಯ ದಾಖಲಾತಿಗೆ ವಯೋಮಿತಿ ಸಡಿಲಗೊಳಿಸಿದ ಸರಕಾರ | ಈ ಬಾರಿ 5 ವರ್ಷ 5 ತಿಂಗಳು ತುಂಬಿದ ಮಕ್ಕಳ ದಾಖಲಾತಿಗೆ ಅವಕಾಶ

Picture of Savistara

Savistara

Bureau Report

ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ, ಪೋಷಕರಿಗೆ ಗುಡ್‌ ನ್ಯೂಸ್‌ ನೀಡಿದೆ. ಇದರ ಪ್ರಕಾರ 5 ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು 1 ನೇ ತರಗತಿಗೆ ದಾಖಲಾತಿ ಮಾಡಲು ಸಾಧ್ಯವಾಗಲಿದೆ. ಇದಕ್ಕೂ ಮುನ್ನ ರಾಜ್ಯ ಪಠ್ಯಕ್ರಮದಲ್ಲಿ 1ನೇ ತರಗತಿಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲು 6 ವರ್ಷ ಆಗಿರಬೇಕಾಗಿರುವುದು ಕಡ್ಡಾಯವಾಗಿತ್ತು.ಸಮಗ್ರ ಶಿಕ್ಷಣ ಇಲಾಖೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ನಡೆದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ಇದರೊಂದಿಗೆ ಶಾಲಾ ಮಕ್ಕಳ ವಯೋಮಿತಿ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ.1ನೇ ತರಗತಿಗೆ ವಯೋಮಿತಿ ಸಡಲಿಕೆ ‌ಮಾಡುವ ಸಾಧ್ಯತೆ ಬಗ್ಗೆ ಸಾಕಷ್ಟು ವರದಿಗಳು ಬಂದಿದ್ದವು. ಈಗಾಗಲೇ ಎಸ್‌ಇಪಿ ಸಮಿತಿಯಿಂದ ಸರ್ಕಾರಕ್ಕೆ ವರದಿ ಕೂಡ ಸಲ್ಲಿಕೆಯಾಗಿತ್ತು. 1ನೇ ತರಗತಿಗೆ 6 ವರ್ಷ ಕಡ್ಡಾಯ ನಿಯಮದಿಂದ ವಾರ್ಷಿಕವಾಗಿ 5 ಲಕ್ಷ ಮಂದಿ ಮಕ್ಕಳಿಗೆ ಶಾಲಾ ದಾಖಲಾತಿ ಮಾಡುವ ವೇಳೆ ಸಮಸ್ಯೆ ಆಗುತ್ತಿತ್ತು ಎನ್ನಲಾಗಿದೆ. ಇದೀಗ SEP ಸಮಿತಿ 5 ವರ್ಷ 10 ತಿಂಗಳಿಗೆ ಶಿಫಾರಸ್ಸು ಮಾಡಿ ವರದಿ ಸಲ್ಲಿಕೆ ಮಾಡಿತ್ತು. ಆದರೆ, ಶಿಕ್ಷಣ ಇಲಾಖೆ 5 ವರ್ಷ 5 ತಿಂಗಳು ಆಗಿರುವ ಮಕ್ಕಳಿಗೂ 1ನೇ ತರಗತಿಗೆ ದಾಖಲಾತಿ ಮಾಡಿಕೊಳ್ಳಲು ಅವಕಾಶ ನೀಡಿದೆ.1 ನೇ ತರಗತಿಗೆ ಸೇರಿಸಲು ಜೂನ್ 1 ಕ್ಕೆ 6 ವರ್ಷ ಕಡ್ಡಾಯ. ಪೋಷಕರು ಮಕ್ಕಳ‌ ಮೇಲೆ ಒತ್ತಡ ಹಾಕಬಾರದು. ಪೋಷಕರು ವಯಸ್ಸಿನ ಗೊಂದಲಕ್ಕೆ ಸಿಲುಕಿದ್ದಾರೆ. ದೇಶದಲ್ಲಿ ಎಲ್ಲಾ ಕಡೆ ಕೂಡ 6 ವರ್ಷ ಕಡ್ಡಾಯ ಮಾಡಲಾಗಿದೆ. ಈ ವರ್ಷಕ್ಕೆ ಮಾತ್ರ ವಯಸ್ಸು ಸಡಿಲಿಕೆ ‌ಮಾಡಿದ್ದೇವೆ. ಈ ವರ್ಷಕ್ಕೆ ‌ಮಾತ್ರ ವಯೋಮಿತಿ ಸಡಲಿಕೆ ಮಾತ್ರ ಅನ್ವಯವಾಗಲಿದೆ. ಮುಂದಿನ ವರ್ಷದಿಂದ 6 ವರ್ಷ ಕಡ್ಡಾಯ ಇರಲಿದೆ. 5 ವರ್ಷ 5 ತಿಂಗಳು ಆಗಿರಬೇಕು ಇದು ಈ ವರ್ಷಕ್ಕೆ ಮಾತ್ರ ಅನ್ವಯ ಎಂದು ಮಾಹಿತಿ ನೀಡಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!