ಬೆಳಗಾವಿ: ಬಿಜೆಪಿಯಿಂದ ಜನಾಕ್ರೋಶ ಯಾತ್ರೆ; ಕಾಂಗ್ರೆಸ್ ವಿರುದ್ಧ ಹರಿಹಾಯ್ದ ನಾಯಕರು

Picture of Savistara

Savistara

Bureau Report

ಬೆಳಗಾವಿ: ಅಗತ್ಯ ವಸ್ತುಗಳ ಬೆಲೆ ಏರಿಕೆ, ಮುಸ್ಲಿಂ ಓಲೈಕೆ ಹಾಗೂ ಪರಿಶಿಷ್ಟರ ಹಣ ಲೂಟಿ ಆರೋಪದಡಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ನಗರದಲ್ಲಿ ಬಿಜೆಪಿಯವರು ಬುಧವಾರ ಎರಡನೇ ಹಂತದ ಜನಾಕ್ರೋಶ ಯಾತ್ರೆ ನಡೆಸಿದರು.

ಮೊದಲ ಹಂತದ ಯಾತ್ರೆ ಸಫಲವಾದ ಹಿನ್ನೆಲೆಯಲ್ಲಿ ಎರಡನೇ ಹಂತದ ಯಾತ್ರೆಗೆ ಪಕ್ಷದ ನಾಯಕರು ಹುಮ್ಮಸ್ಸಿನಿಂದ ಧುಮುಕಿದರು.ಇಲ್ಲಿನ ಬಸವೇಶ್ವರ ವೃತ್ತದ ಬಳಿ ಇರುವ ವೇದಿಕೆಯಿಂದ ಆರಂಭಗೊಂಡ ಯಾತ್ರೆ, ಶಹಾಪುರದ ನಾಥಪೈ ವೃತ್ತದ ಮಾರ್ಗವಾಗಿ ಸಾಗಿ ಶಿವಾಜಿ ಉದ್ಯಾನ ತಲುಪಿತು.ಜಿಲ್ಲೆಯ ವಿವಿಧೆಡೆಯಿಂದ ಬಂದಿದ್ದ ಕಾರ್ಯಕರ್ತರು, ಬಿಸಿಲಲ್ಲೂ ಉತ್ಸಾಹದಿಂದ ಹೆಜ್ಜೆಹಾಕಿದರು. ‘ಕಾಂಗ್ರೆಸ್ ಸರ್ಕಾರ 50ಕ್ಕೂ ಅಧಿಕ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿ, ಬಡವರು ಮತ್ತು ಮಧ್ಯಮ ವರ್ಗದ ಜನರ ಗಾಯದ ಮೇಲೆ ಬರೆ ಎಳೆದಿದೆ’ ಎಂದು ದೂರಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಸಂಸದರಾದ ಜಗದೀಶ ಶೆಟ್ಟ‌ರ್, ಗೋವಿಂದ ಕಾರಜೋಳ, ಶಾಸಕರಾದ ಅಭಯ ಪಾಟೀಲ, ಬಾಲಚಂದ್ರ ಜಾರಕಿಹೊಳಿ, ನಿಖಿಲ್ ಕತ್ತಿ, ದುರ್ಯೋಧನ ಐಹೊಳೆ, ಮುಖಂಡರಾದ ಬಿ.ಶ್ರೀರಾಮುಲು, ಅನಿಲ ಬೆನಕೆ, ಪಿ.ರಾಜೀವ್ ಮತ್ತಿತರರು ಪಾಲ್ಗೊಂಡಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!