ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ಇನ್ನು ಮುಂದೆ ತಂಬಾಕು ಸಂಬಂಧಿಸಿದ ಜಾಹೀರಾತು ಹಾಕುವಂತಿಲ್ಲ ಸರಕಾರದ ಸೂಚನೆ

Picture of Savistara

Savistara

Bureau Report

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಸೂಚನೆ ನೀಡಲಾಗಿದೆ.ಇನ್ನು ಮುಂದೆ ಇಂತಹ ಜಾಹೀರಾತುಗಳನ್ನು ಪ್ರದರ್ಶನ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ವ್ಯಕ್ತಿಯೊಬ್ಬರು ‘ಎಕ್ಸ್‌ʼ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದರು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಕ್ರಮಕೈಗೊಂಡಿದೆ.

News Updates

ಮೋದಿ ಸರ್ಕಾರದ ‘ರಾಷ್ಟ್ರೀಯ ಹಾಲಿನ ಅಭಿವೃದ್ಧಿ ಯೋಜನೆ’ಯಿಂದ ಶಿಮುಲ್ ವ್ಯಾಪ್ತಿಯ 37,750ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ನೇರ ಲಾಭ! ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ: ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

[t4b-ticker]
error: Content is protected !!