ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವರ ಉತ್ಸವ ವೇಳೆ ರಥದ ಮೇಲ್ಬಾಗ ಕುಸಿತ!

Picture of Savistara

Savistara

Bureau Report

ತೇರಿನಲ್ಲಿದ್ದ ಅರ್ಚಕರು, ಇತರರು ಅದೃಷ್ಟವಶಾತ್ ಪಾರು

ಮೂಲ್ಕಿ: ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರು ಮುರಿದು ಬಿದ್ದಿರುವ ಘಟನೆ ತಡರಾತ್ರಿ ನಡೆದಿದೆ.ಶನಿವಾರ ಬೆಳಗ್ಗಿನ ಜಾವ ಸುಮಾರು 1.40 ರಿಂದ 2 ಗಂಟೆ ವೇಳೆ ಬ್ರಹ್ಮರಥೋತ್ಸವ ತೇರಿನ ಮೇಲ್ಬಾಗ ಕುಸಿದು ಬಿದ್ದಿದೆ. ಈ ಸಂದರ್ಭದಲ್ಲಿ ಅರ್ಚಕರು ತೇರಿನಲ್ಲೇ ಇದ್ದರು. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂಬ ಮಾಹಿತಿ ದೊರೆತಿದೆ. ಈ ಘಟನೆಯು ಭಕ್ತ ಸಮೂಹದಲ್ಲಿ ಭಾರೀ ಆತಂಕಕ್ಕೆ ಕಾರಣವಾಯಿತು. ಬಳಿಕ ದೇವರ ಉತ್ಸವವನ್ನು ಚಂದ್ರ ಮಂಡಲ ರಥದಲ್ಲಿ ದೇವರ ಉತ್ಸವ ಮುಂದುವರಿಸಲಾಯಿತು.

News Updates

ಮೋದಿ ಸರ್ಕಾರದ ‘ರಾಷ್ಟ್ರೀಯ ಹಾಲಿನ ಅಭಿವೃದ್ಧಿ ಯೋಜನೆ’ಯಿಂದ ಶಿಮುಲ್ ವ್ಯಾಪ್ತಿಯ 37,750ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ನೇರ ಲಾಭ! ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ: ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

[t4b-ticker]
error: Content is protected !!