ರಾಜ್ಯದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68) ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ.
ಬೆಂಗಳೂರು: ರಾಜ್ಯದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರನ್ನು ಹತ್ಯೆ ಮಾಡಲಾಗಿದ್ದು, ನಗರದ ಹೆಚ್ಎಸ್ಆರ್ ಲೇಔಟ್‌ನ ಮನೆಯಲ್ಲಿ ಭಾನುವಾರ ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆಯಾಗಿದೆ.ಚಾಕುವಿನಿಂದ ಇರಿದು ಹತ್ಯೆಗೈದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಕುರಿತು ಅವರ ಪತ್ನಿ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ಕೈಗೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.ಬಿಹಾರದ ಚಂಪಾರಣ್ ಮೂಲದವರಾಗಿದ್ದ ಓಂ ಪ್ರಕಾಶ್ 1981ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದರು. ಕರ್ನಾಟಕ ಗೃಹರಕ್ಷಕದಳ, ಅಗ್ನಿಶಾಮಕದಳಗಳಲ್ಲಿ ಮಹಾನಿರ್ದೇಶಕರಾಗಿದ್ದ ಅವರು, 2015ರಿಂದ 2017ರವರೆಗೂ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.
ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.













































