ದ್ವಿತೀಯ ಪಿ.ಯು.ಸಿ ಪರೀಕ್ಷೆ-2 ಏ.24ರಿಂದ ಮೇ8ರವರೆಗೆ ನಡೆಯಲಿದ್ದು ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ 4 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲೈ ಮುಹಿಲನ್ ಎಂ.ಪಿ.ಆದೇಶಿಸಿದ್ದಾರೆ.ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ರವಾನಿಸುವುದು ಇತ್ಯಾದಿ ಚಟುವಟಿಕೆ,ಯಾವುದೇ ರೀತಿಯ ಕಾರಕ(ಆ್ಯಸಿಡ್) ಸ್ಫೋಟಕ ವಸ್ತುಗಳನ್ನು ಕೊಂಡುಹೋಗುವುದು, ಮಾರಕ ಆಯುಧಗಳನ್ನು ಹೊಂದುವುದು, ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದು, ಪರೀಕ್ಷೆಗೆ ಸಂಬಂಧಿಸಿದ ಅಭ್ಯರ್ಥಿಗಳನ್ನು ಹೊರತುಪಡಿಸಿ ಸಾರ್ವಜನಿಕರು ಐದು ಅಥವಾ ಐದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು, ತಿರುಗಾಡುವುದು, ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಜೆರಾಕ್ಸ್ ಮತ್ತು ಕಂಪ್ಯೂಟರ್/ಸೈಬರ್ ಅಂಗಡಿಗಳು/ಪ್ರಿಂಟಿಂಗ್ ಶಾಪ್‌ಗಳು ಕಾರ್ಯ ನಿರ್ವಹಿಸುವುದು ಮತ್ತು ಪರೀಕ್ಷಾ ಕೇಂದ್ರದ ಆವರಣದಲ್ಲಿ ಮೊಬೈಲ್ ದೂರವಾಣಿ, ಬ್ಲೂಟೂತ್ ಹಾಗೂ ಪೇಜರ್ ಇತ್ಯಾದಿ ಎಲೆಕ್ಟ್ರಾನಿಕ್ಸ್ ಸಂಪರ್ಕ ಉಪಕರಣಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಈ ನಿಷೇಧಾಜ್ಞೆ ಜಾರಿಯಲ್ಲಿರುವ ಪ್ರದೇಶದಲ್ಲಿ ಸರ್ಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ ಬ್ಯಾಂಕ್ ಭದ್ರತಾ ಸಿಬ್ಬಂದಿಗಳು ಕರ್ತವ್ಯ ನಿರ್ವಹಣೆ ವೇಳೆ ಲಾಠಿ/ಶಸ್ತ್ರಾಸ್ತ್ರ ಉಪಯೋಗಿಸುವುದಕ್ಕೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲೈ ಮುಹಿಲನ್ ಎಂ.ಪಿ ಆದೇಶಿಸಿದ್ದಾರೆ.
ಎ.24-ಮೇ8: ದ್ವಿತೀಯ ಪಿ.ಯು.ಸಿ. ಪರೀಕ್ಷೆ-2: ನಿಷೇಧಾಜ್ಞೆ ಜಾರಿ
Savistara
Bureau Report
[t4b-ticker]













































