ಮಂಗಳೂರು: ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಏಪ್ರಿಲ್ 22ರಂದು ಬೆಳಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ಜನರು ತಮ್ಮ ಅಹವಾಲುಗಳೊಂದಿಗೆ ಮಂಗಳವಾರ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬಂದು ಕ್ಯಾ. ಚೌಟ ಅವರನ್ನು ಖುದ್ದು ಭೇಟಿ ಮಾಡಬಹುದು. ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಗಮನಕ್ಕೆ ತರಬಹುದು ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ
ಸಂಸದ ಕ್ಯಾ. ಚೌಟ ಏ. 22 ರಂದು ಸಾರ್ವಜನಿಕರ ಭೇಟಿಗೆ ಲಭ್ಯ
Savistara
Bureau Report
[t4b-ticker]













































