ರಾಕಿಂಗ್ ಸ್ಟಾರ್ Yash- ಮಧ್ಯ ಪ್ರದೇಶ CM ಮೋಹನ್ ಯಾದವ್ ಭೇಟಿ; ಕುತೂಹಲ!

Picture of Savistara

Savistara

Bureau Report

ಈ ಬೆನ್ನಲ್ಲೇ ಭೋಪಾಲ್ ನಲ್ಲಿ ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಅವರನ್ನು ಯಶ್ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.

ಭೋಪಾಲ್: ರಾಕಿಂಗ್ ಸ್ಟಾರ್ ಯಶ್ ಮಧ್ಯಪ್ರದೇಶ ಪ್ರವಾಸ ಕೈಗೊಂಡಿದ್ದು, ಉಜ್ಜೈನ್ ನಲ್ಲಿನ ಮಹಾಕಾಳೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.ಈ ಬೆನ್ನಲ್ಲೇ ಭೋಪಾಲ್ ನಲ್ಲಿ ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಅವರನ್ನು ಯಶ್ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.Yash ರಾವಣನಾಗಿ ನಟಿಸುತ್ತಿರುವ ‘ರಾಮಾಯಣ’ ಸಿನಿಮಾ ಶೂಟ್ ಮುಂಬೈನಲ್ಲಿ ನಡೆಯಲಿದೆ. ಅದಕ್ಕೂ ಮೊದಲು ಅವರು ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವಾಲಯಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಸಿಎಂ ಮೋಹನ್ ಯಾದವ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

‘ಕೆಜಿಎಫ್ 2’ ಬಳಿಕ ದೇಶಾದ್ಯಂತ ಜನಪ್ರಿಯಗೊಂಡಿರುವ ಯಶ್, ತಮ್ಮ ರಾಜ್ಯಕ್ಕೆ ಬರುತ್ತಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆಯೇ ಮಧ್ಯ ಪ್ರದೇಶ ಸಿಎಂ ಮೋಹನ್ ಯಾದವ್ ಭೇಟಿಗೆ ಅವಕಾಶ ಕಲ್ಪಿಸಿದ್ದಾರೆ. ಆ ಬಳಿಕ ಸೌಹಾರ್ದಯುತ ಭೇಟಿ ನಡೆದಿದೆ. ಅಭಿಮಾನಿಗಳ ವಲಯದಲ್ಲಿ ಈ ಫೋಟೋ ವೈರಲ್ ಆಗಿ ಗಮನ ಸೆಳೆದಿದೆ.ಯಶ್ ‘ಟಾಕ್ಸಿಕ್’ ಚಿತ್ರದ ಒಂದಷ್ಟು ಪೋರ್ಷನ್​ನ ಶೂಟ್ ಪೂರ್ಣಗೊಳಿಸಿದ್ದಾರೆ. ಈಗ ಅವರ ಗಮನ ‘ರಾಮಾಯಣ’ ಚಿತ್ರದ ಮೇಲೆ ಇದೆ. ಇತ್ತೀಚೆಗೆ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ‘ಕೆಜಿಎಫ್ 3’ ಕೆಲಸಗಳು ಶೀಘ್ರವೇ ಆರಂಭ ಆಗಲಿದೆ ಎನ್ನುವ ಸೂಚನೆ ಕೊಟ್ಟಿದ್ದಾರೆ. ಈ ಸಿನಿಮಾ ಕೆಲಸಗಳು ಪೂರ್ಣಗೊಂಡ ಬಳಿಕ ಯಶ್ ಅವರು ‘ಕೆಜಿಎಫ್ 3’ ಕೆಲಸಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಇದೆ.

News Updates

ಮೋದಿ ಸರ್ಕಾರದ ‘ರಾಷ್ಟ್ರೀಯ ಹಾಲಿನ ಅಭಿವೃದ್ಧಿ ಯೋಜನೆ’ಯಿಂದ ಶಿಮುಲ್ ವ್ಯಾಪ್ತಿಯ 37,750ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ನೇರ ಲಾಭ! ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ: ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

[t4b-ticker]
error: Content is protected !!