ಇನ್ಮುಂದೆ ಉಚಿತ ಬಸ್ ಪ್ರಯಾಣಕ್ಕೆ ಆಧಾರ್ ಬೇಡ !!

Picture of Savistara

Savistara

Bureau Report

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿಗಳ ಪೈಕಿ ‘ಶಕ್ತಿ ಯೋಜನೆ’ಯ ಉಚಿತ ಬಸ್ ಪ್ರಯಾಣ ಕೂಡ ಒಂದು.

ಸರ್ಕಾರಿ ಬಸ್ ನಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುವ ವೇಳೆ ಗುರುತಿಗಾಗಿ ಆಧಾ‌ರ್ ಕಾರ್ಡನ್ನು ತೋರಿಸುತ್ತಿದ್ದರು. ಆದರೆ ಇನ್ನು ಮುಂದೆ ಉಚಿತ ಬಸ್‌ ಪ್ರಯಾಣಕ್ಕೆ ಆಧಾ‌ರ್ ಬೇಡ ಎಂದು ಹೇಳಲಾಗುತ್ತಿದೆ. ಕಾರಣ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ. ಹೌದು, ಶಕ್ತಿ ಯೋಜನೆಯ ಲಾಭವನ್ನು ಇನ್ನಷ್ಟು ಸರಳವಾಗಿ ಪಡೆಯಲು ಸರ್ಕಾರ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡುವ ನಿರ್ಧಾರ ಕೈಗೊಂಡಿದೆ.ಸ್ಮಾರ್ಟ್ ಕಾರ್ಡ್ ಪಡೆಯಲು ಮಹಿಳೆಯರು ‘ಗ್ರಾಮ ಒನ್’ ಅಥವಾ ‘ಬೆಂಗಳೂರು ಒನ್’ ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬೇಕು. ಅಲ್ಲದೆ, ಸೇವಾಸಿಂಧು ವೆಬ್‌ಸೈಟ್‌ ಬಳಸಿ ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸಿದ ನಂತರ ತಕ್ಷಣವೇ ಪ್ರಿಂಟ್ ಮಾಡಿದ ರಸೀದಿಯೇ ಸ್ಮಾರ್ಟ್ ಕಾರ್ಡ್ ಎಂದು ಪರಿಗಣಿಸಲಾಗುತ್ತದೆ.

News Updates

ಮೋದಿ ಸರ್ಕಾರದ ‘ರಾಷ್ಟ್ರೀಯ ಹಾಲಿನ ಅಭಿವೃದ್ಧಿ ಯೋಜನೆ’ಯಿಂದ ಶಿಮುಲ್ ವ್ಯಾಪ್ತಿಯ 37,750ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ನೇರ ಲಾಭ! ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ: ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

[t4b-ticker]
error: Content is protected !!