ಜೆದ್ದಾ: ಸೌದಿ ಅರೇಬಿಯಾದ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಆಹ್ವಾನದ ಮೇರೆಗೆ ಭಾರತ ಪ್ರಧಾನಿ ನರೇಂದ್ರ ಮೋದಿ, ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ.
ಪ್ರಧಾನಿ ಮೋದಿ ಅವರು ಇಂದು ಮಧ್ಯಾಹ್ನ ಜೆದ್ದಾಗೆ ಬಂದಿಳಿದರು.ಭಾರತ ಹಾಗೂ ಸೌದಿ ಅರೇಬಿಯಾ ನಡುವೆ ದ್ವಿಪಕ್ಷೀಯ ಬಾಂಧವ್ಯ ಇನ್ನಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳ ನಾಯಕರು ಮಾತುಕತೆ ನಡೆಸಲಿದ್ದಾರೆ.ಪ್ರಧಾನಿ ಮೋದಿ ಅವರಿಗೆ ಗೌರವ ಸೂಚಕವಾಗಿ ಸೌದಿಯ ವಾಯುಪ್ರದೇಶದಲ್ಲಿ ರಾಯಲ್ ಸೌದಿ ವಾಯುಪಡೆಯ ಎಫ್-15 ಯುದ್ಧ ವಿಮಾನಗಳು ಪ್ರಧಾನಿ ವಿಮಾನಕ್ಕೆ ಬೆಂಗಾವಲಾಗಿ ಚಲಿಸಿದವು.
ಉಭಯ ದೇಶಗಳ ನಡುವಣ ರಕ್ಷಣಾ ಸಹಕಾರವನ್ನು ಬಲಪಡಿಸುವ ಸಂಕೇತ ಇದಾಗಿದೆ ಎಂದು ಅಂದಾಜಿಸಲಾಗಿದೆ.ಸೌದಿ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಅವರನ್ನು ‘ನನ್ನ ಸಹೋದರ’ ಎಂದು ಪ್ರಧಾನಿ ಮೋದಿ ಸಂಬೋಧಿಸಿದ್ದಾರೆ.ಸೌದಿ ಭೇಟಿಯ ಸಂದರ್ಭದಲ್ಲಿ ‘ಹಜ್’ ಯಾತ್ರೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮಾತುಕತೆ ನಡೆಸುವ ಸಾಧ್ಯತೆಯಿದೆ. ಈ ವೇಳೆ ಭಾರತೀಯ ಕಾರ್ಮಿಕರನ್ನು ಭೇಟಿಯಾಗಲಿದ್ದಾರೆ.













































