ಜಮ್ಮುವಿನ ಉದಂಪು‌ರ್ ಬಳಿ ಉಗ್ರರ ವಿರುದ್ಧ ಸೇನಾ ಕಾರ್ಯಾಚರಣೆ: ಯೋಧ ಹುತಾತ್ಮ

Picture of Savistara

Savistara

Bureau Report

ಜಮ್ಮು: ಕಾಶ್ಮೀರದ ಪಹಲ್ಕಾಮ್‌ನಲ್ಲಿ ಉಗ್ರರು ನಡೆಸಿದ ದಾಳಿಯ ಬೆನ್ನಲ್ಲೇ ಜಮ್ಮುವಿನ ಉದಂಪುರ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ತಡರಾತ್ರಿ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಸೇನಾ ತುಕಡಿಗಳು ಡುಡು ಬಸಂತ್‌ರ್ಗ ಬಳಿಯ ಕಾಡಿನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದವು. ಈ ವೇಳೆ ಉಗ್ರರು ಹಾಗೂ ಯೋಧರ ನಡುವೆ ಭೀಕರ ಗುಂಡಿನ ಕಾಳಗ ನಡೆದಿದೆ.ಗುಂಡಿನ ಕಾಳಗದಲ್ಲಿ ಯೋದರೊಬ್ಬರು ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಿಸದೇ ಅವರು ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.ಸ್ಥಳದಲ್ಲಿ ಉಗ್ರರ ಪತ್ತೆ ಕಾರ್ಯಾಚರಣೆ ಮುಂದುವರೆದಿದ್ದು ಹೆಚ್ಚಿನ ತುಕಡಿಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಪಹಲ್ಗಾಮ್ ಪಟ್ಟಣ ಸಮೀಪದ ಹುಲ್ಲುಗಾವಲಿನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಮಂಗಳವಾರ ಗುಂಡಿನ ದಾಳಿ ನಡೆಸಿದ್ದರು. 28 ಮಂದಿ ಮೃತಪಟ್ಟು, ಕನಿಷ್ಠ 20 ಜನರು ಗಾಯಗೊಂಡಿದ್ದಾರೆ.

[t4b-ticker]
error: Content is protected !!