ಭಯೋತ್ಪಾದಕರಿಗೆ ಬೆಂಬಲ ಸೂಚಿಸಿದ ಪ್ರಕರಣ |ಆರೋಪಿ ನಿಚ್ಚು ಮಂಗಳೂರು ಪರಾರಿ|ಆರೋಪಿ ಪತ್ತೆಗೆ ಪೊಲೀಸ್‌ ತಂಡ

Picture of Savistara

Savistara

Bureau Report

.ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪಹಲ್ಲಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು (Pahalgam Attack) ಸಮರ್ಥಿಸಿಕೊಂಡು ಕಿಡಿಗೇಡಿಯೊಬ್ಬ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿ ವಿಕೃತಿ ಮೆರೆದಿರುವುದು ಮಂಗಳೂರಿನಲ್ಲಿ (Mangalore) ನಡೆದಿದೆ. ನಿಚ್ಚು ಮಂಗಳೂರು ಫೇಸ್‌ಬುಕ್ ಪೇಜ್‌ನಲ್ಲಿ. ಉಗ್ರರ ಕೃತ್ಯಕ್ಕೆ ಬೇರೆಯೇ ವ್ಯಾಖ್ಯಾನ ಮಾಡಲಾಗಿದೆ.

ಜಮ್ಮು ಕಾಶ್ಮೀರದ ಪಹಲ್ಲಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು (Pahalgam Attack) ಕಿಡಿಗೇಡಿಯೊಬ್ಬ ಸಮರ್ಥಿಸಿಕೊಂಡು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿ ವಿಕೃತಿ ಮೆರೆದಿರುವುದು ಮಂಗಳೂರಿನಲ್ಲಿ (Mangalore) ನಡೆದಿದೆ.

ನಿಚ್ಚು ಮಂಗಳೂರು ಫೇಸ್‌ಬುಕ್ ಪೇಜ್‌ನಲ್ಲಿ, ಉಗ್ರರ ಕೃತ್ಯಕ್ಕೆ ಬೇರೆಯೇ ವ್ಯಾಖ್ಯಾನ ಮಾಡಲಾಗಿದೆ. 2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್‌ನಲ್ಲಿ ಮೂವರು ಮುಸ್ಲಿಮರನ್ನು ಕೊಲ್ಲಲಾಗಿತ್ತು. ಆರೋಪಿ ಚೇತನ್‌ ಸಿಂಗ್‌ಗೆ ಸಾರ್ವಜನಿಕವಾಗಿ ಹಗ್ಗ ಹಾಕಲಿಲ್ಲ. ಆ ಕಾರಣಕ್ಕೆ ಕಾಶ್ಮೀರದಲ್ಲಿ ಈ ಕೃತ್ಯ ನಡೆದಿದೆ. ಪಾಲ್ಗರ್ ಘಟನೆಯಿಂದಾಗಿ ಕಾಶ್ಮೀರದಲ್ಲಿ ಧರ್ಮ ಕೇಳಿ ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಸಮರ್ಥನೆ ಮಾಡಿಕೊಂಡಿದ್ದಾನೆ.

ಪೋಸ್ಟ್ ಹಾಕಿದ ನಿಚ್ಚು ಮಂಗಳೂರು ಫೇಸ್‌ಬುಕ್‌ ಪೇಜ್ ವಿರುದ್ಧ ಉಳ್ಳಾಲದ ಸತೀಶ್ ಕುಮಾರ್ ದೂರು ನೀಡಿದ್ದಾರೆ. ಈ ಸಂಬಂಧ ಮಂಗಳೂರಿನ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 192 ಮತ್ತು 353 (1) (ಬಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್‌ಬುಕ್ ಪೇಜ್‌ ಡಿಪಿಯಲ್ಲಿರುವ ವ್ಯಕ್ತಿಗಾಗಿ ಪೊಲೀಸರ ಹುಡುಕಾಟ ಆರಂಭಿಸಿದ್ದಾರೆ.

ಆರೋಪಿ ಕೊಣಾಜೆ ಪೊಲೀಸ್‌ ಠಾಣಾ ವ್ಯಾಪ್ತಿಯ ನಿವಾಸಿ ಎಂದು ತಿಳಿದು ಬಂದಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!