ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್‌ನಲ್ಲಿ ನಡೆದಭಯೋತ್ಪಾದಕರ ದಾಳಿಯ ನಂತರ ಉಗ್ರರ ವಿರುದ್ಧದ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿರುವ ಭದ್ರತಾ ಪಡೆ ಮತ್ತೆ ಮೂವರು ಉಗ್ರರ ಮನೆಗಳನ್ನು ಧ್ವಂಸಗೊಳಿಸಿದೆ ಎಂದು ಅಧಿಕಾರಿಗಳು ಇಂದು (ಭಾನುವಾರ) ತಿಳಿಸಿದ್ದಾರೆ.
ಇದರೊಂದಿಗೆ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ, ಈವರೆಗೆ ಒಟ್ಟು ಒಂಬತ್ತು ಮನೆಗಳನ್ನು ನೆಲಸಮಗೊಳಿಸಲಾಗಿದೆ.ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ, ಪುಲ್ವಾಮಾ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.ಶೋಪಿಯಾನ್ ಜಿಲ್ಲೆಯಲ್ಲಿ ಕಳೆದ ವರ್ಷ ಭಯೋತ್ಪಾದಕ ಸಂಘಟನೆಗೆ ಸೇರಿದ್ದ ಅಸ್ನಾನ್ ಶಫಿಯ ಮನೆಯನ್ನು ನೆಲಸಮಗೊಳಿಸಲಾಗಿದೆ.
ಪುಲ್ವಾಮಾದಲ್ಲಿ ಸಕ್ರಿಯ ಉಗ್ರ ಅಮೀರ್ ನಜೀರ್ ಮತ್ತು ಬಂಡಿಪೋರಾದಲ್ಲಿ ಲಷ್ಕರ್-ಎ-ತಯಬಾದ (ಎಲ್‌ಇಟಿ) ಉಗ್ರ ಜಮೀಲ್ ಅಹ್ಮದ್ ಶೇರ್‌ಗೊಬ್ರೆ ಮನೆಗಳನ್ನು ಧ್ವಂಸಗೊಳಿಸಲಾಗಿದೆ.













































