ಗಡಿಯಲ್ಲಿ ಸತತ 4ನೇ ದಿನವೂ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ, ಭಾರತ ಪ್ರತ್ಯುತ್ತರ

Picture of Savistara

Savistara

Bureau Report

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಕದನ ವಿರಾಮ ನಿಯಮ ಉಲ್ಲಂಘಿಸಿರುವ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಸೇನೆಯ ಅಧಿಕಾರಿಗಳು ಇಂದು (ಸೋಮವಾರ) ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ಕುಪ್ಪಾರ ಜಿಲ್ಲೆಗಳಲ್ಲಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಅವರು ತಿಳಿಸಿದ್ದಾರೆ.ಇದರೊಂದಿಗೆ ಸತತ ನಾಲ್ಕನೇ ದಿನದ ರಾತ್ರಿಯಲ್ಲೂ ಪಾಕ್‌ನಿಂದ ಕದನ ವಿರಾಮ ನಿಯಮ ಉಲ್ಲಂಘನೆಯಾಗಿದೆ.ಪಹಲ್ಲಾಮ್‌ನಲ್ಲಿ ನಡೆದ ಉಗ್ರರ ದಾಳಿಯ ನಂತರ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಪದೇ ಪದೇ ಕದನ ವಿರಾಮ ನಿಯಮ ಉಲ್ಲಂಘಿಸುತ್ತಿರುವ ಪಾಕ್ ಸೇನೆಯ ವಿರುದ್ಧ ಸಂಘರ್ಷ ಮುಂದುವರಿದಿದೆ.

ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.

[t4b-ticker]
error: Content is protected !!