ರೈಲ್ವೆ ನೇಮಕಾತಿ ಮಂಡಲಿ ಪರೀಕ್ಷೆ ಜನಿವಾರ,ಮಂಗಳಸೂತ್ರ ತೆಗೆಸದಂತೆ ಸಚಿವ ಸೋಮಣ್ಣ ಸೂಚನೆ |ಸಂಸದ ಕ್ಯಾ.ಬ್ರಿಜೇಶ್ ಚೌಟ ಮನವಿಗೆ ಸ್ಪಂದಿಸಿದ ಸಚಿವರು

Picture of Savistara

Savistara

Bureau Report

ಮಂಗಳೂರು : ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ದಕ್ಷಿಣ ಕನ್ನಡ ಬಿಜೆಪಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಈ ವಿಚಾರವನ್ನು ರೈಲ್ವೆ ಇಲಾಖೆ ಸಚಿವರ ಗಮನಕ್ಕೆ ತಂದಿದ್ದರು.ಭಾರತೀಯ ರೈಲ್ವೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ಬರೆಯುವವರು ಮಂಗಳಸೂತ್ರ, ಜನಿವಾರದಂತಹ ಧಾರ್ಮಿಕ ಸಂಕೇತಗಳು ಮತ್ತು ಆಭರಣಗಳನ್ನು ತೆಗೆಯುವಂತೆ ಮಾಡಬಾರದು. ಜನಿವಾರ, ಮಂಗಳಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸೂಚನೆ ನೀಡಿದ್ದಾರೆ ಎಂದು ತಿಳಿಸಲು ಸಂತೋಷವಾಗುತ್ತಿದೆ. ಮಂಗಳಸೂತ್ರ ಹಾಗೂ ಧಾರ್ಮಿಕ ಸಂಕೇತಗಳನ್ನು ತೆಗೆಯಬೇಕೆಂದು ಹಾಲ್ ಟಿಕೆಟ್‌ನಲ್ಲಿ ಉಲ್ಲೇಖಿಸಲ್ಪಟ್ಟಿದ್ದ ಬಗ್ಗೆ ನಾವು ಅವರ ಗಮನಕ್ಕೆ ತಂದಿದ್ದೆವು. ಅವರು ಮಧ್ಯಪ್ರವೇಶಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಎಕ್ಸ್ ಸಂದೇಶದಲ್ಲಿ ಬ್ರಿಜೇಶ್ ಚೌಟ ಸ್ಪಷ್ಟಪಡಿಸಿದ್ದಾರೆ.

ರೈಲ್ವೆ ನೇಮಕಾತಿ ಮಂಡಳಿ ಕ್ರಮದ ವಿರುದ್ಧ ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಸಹಿತ ಹಿಂದೂ ಸಂಘಟನೆಗಳ ಹಲವು ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಹಿಂದೂಗಳ ಭಾವನೆಗೆ ಧಕ್ಕೆಬಾರದ ರೀತಿಯಲ್ಲಿ ಪರೀಕ್ಷಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದರು.ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆ ಏಪ್ರಿಲ್ 28, 29 ಹಾಗೂ 30ರಂದು ಮಂಗಳೂರಿನ ಬೋಂದೆಲ್‌ನಲ್ಲರುವ ಬೆಸೆಂಟ್ ವಿದ್ಯಾಕೇಂದ್ರದಲ್ಲಿ ನಡೆಯಲಿದೆ.

[t4b-ticker]
error: Content is protected !!