ವೈದ್ಯ ವೃತ್ತಿಗೆ ಕಳಂಕ ತರುವಂತಹ ಘಟನೆಯೊಂದು ಕರಾವಳಿಯಲ್ಲಿ ಕೋಲಾಹಲ ಸೃಷ್ಟಿಸಿದೆ! ಮಂಗಳೂರಿನ ವೈದ್ಯೆಯೊಬ್ಬರು, ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ “ಕಾಪಾಡಿ, ಕೊಳಕು ಹಿಂದೂಗಳು ನನ್ನನ್ನು ಬೆನ್ನಟ್ಟುತ್ತಿದ್ದಾರೆ. ಹೌದು, ನಾನು ಭಾರತೀಯಳು, ಮತ್ತು ನಾನು ಭಾರತವನ್ನು ದ್ವೇಷಿಸುತ್ತೇನೆ!” ಎಂದು ವಿಷ ಕಾರಿದ್ದು, ಇದೀಗ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು: ವೈದ್ಯ ವೃತ್ತಿಗೆ ಕಳಂಕ ತರುವಂತಹ ಘಟನೆಯೊಂದು ಕರಾವಳಿಯಲ್ಲಿ ಕೋಲಾಹಲ ಸೃಷ್ಟಿಸಿದೆ! ಮಂಗಳೂರಿನ ವೈದ್ಯೆಯೊಬ್ಬರು, ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ, “ಕಾಪಾಡಿ, ಕೊಳಕು ಹಿಂದೂಗಳು ನನ್ನನ್ನು ಬೆನ್ನಟ್ಟುತ್ತಿದ್ದಾರೆ. ಹೌದು, ನಾನು ಭಾರತೀಯಳು, ಮತ್ತು ನಾನು ಭಾರತವನ್ನು ದ್ವೇಷಿಸುತ್ತೇನೆ!” ಎಂದು ವಿಷ ಕಾರಿದ್ದು, ಇದೀಗ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ದೇಶವೇ ಜಮ್ಮು ಕಾಶ್ಮೀರದ ಪಹಲ್ಲಾಮ್‌ನಲ್ಲಿ ನಡೆದ ಹೇಯ ದಾಳಿಯಿಂದ ಕುದಿಯುತ್ತಿರುವಾಗ, ಪಾಕಿಸ್ತಾನದ ವಿರುದ್ಧ ಆಕ್ರೋಶ ಮಡುಗಟ್ಟಿರುವ ಸೂಕ್ಷ್ಮ ಸಂದರ್ಭದಲ್ಲಿಯೇ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯ ವೈದ್ಯೆ ಡಾ. ಅಫೀಫಾ ಫಾತಿಮಾ ಇಂತಹ ದೇಶದ್ರೋಹಿ ಹೇಳಿಕೆ ನೀಡಿರುವುದು ಬೆಂಕಿಗೆ ತುಪ್ಪ ಸುರಿದಂತಾಗಿದೆ. ಹಿಂದೂ ಸಂಘಟನೆಗಳು ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದು, ತಕ್ಷಣದ ಕ್ರಮಕ್ಕೆ ಒತ್ತಾಯಿಸಿವೆ.
ಈ ಘೋರ ಕೃತ್ಯದ ವಿರುದ್ಧ, ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯ ಮಾನವ ಸಂಪನ್ಮೂಲ ವಿಭಾಗದ ಮೊಹಮ್ಮದ್ ಅಸ್ಲಾಂ ಅವರು ನೀಡಿದ ದೂರಿನ ಅನ್ವಯ, ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ ಬಿ ಎನ್ ಎಸ್ ಕಲಂ196(1)(a), 353(2) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
“ಇಂತಹ ದೇಶ ವಿರೋಧಿ ಮತ್ತು ಹಿಂದೂ ವಿರೋಧಿ ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು.ಪೊಲೀಸ್ ಇಲಾಖೆ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಆ ವೈದ್ಯೆಯ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು” ಎಂದು ವಿಶ್ವಹಿಂದೂ ಪರಿಷತ್ ಮುಖಂಡರಾದ ಶರಣ್ ಪಂಪ್‌ವೆಲ್ ಅವರು ಗುಡುಗಿದ್ದಾರೆ.













































