ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇಮಕ: ಮೇ 14 ರಂದು ಪ್ರಮಾಣ ವಚನ

Picture of Savistara

Savistara

Bureau Report

ಜಸ್ಟೀಸ್ ಬಿ.ಆರ್. ಗವಾಯಿ ಅವರು ಮೇ 14 ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.ರಾಷ್ಟ್ರಪತಿ ದೌಪದಿ ಮುರ್ಮು ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರನ್ನು ಮೇ 14, 2025 ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿದ್ದಾರೆ.

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. “ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ, ಭಾರತದ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾದ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರನ್ನು ಮೇ 14, 2025 ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ಸಂತೋಷಪಡುತ್ತೇನೆ” ಎಂದು ತಿಳಿಸಿದ್ದಾರೆ.

[t4b-ticker]
error: Content is protected !!