ಬೆಳ್ಳಂಬೆಳಗ್ಗೆ ಸುಳ್ಯದಲ್ಲಿ ಗುಡುಗು ಸಿಡಿಲಿನ ಅಬ್ಬರದ ಭರ್ಜರಿ ಮಳೆ

Picture of Savistara

Savistara

Bureau Report

ಸುಳ್ಯ: ಗುಡುಗು ಸಿಡಿಲಿನ ಅಬ್ಬರದೊಂದಿಗೆ ಗುರುವಾರ ಬೆಳಗ್ಗಿನ ಜಾವ ಸುಳ್ಯದಲ್ಲಿ ಭರ್ಜರಿ ಮಳೆಯಾಗಿದೆ. ಕಿವಿಗಪ್ಪಳಿಸುವ ಭಾರೀ ಗುಡುಗು ಸಿಡಿಲಿನೊಂದಿಗೆ ಬೆಳಗ್ಗಿನ ಜಾವ 3 ಗಂಟೆಯ ಬಳಿಕ ಮಳೆಯಾಯಿತು. ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಮಳೆ ಸುರಿಯಿತು. ಇಂದು ಬೆಳಿಗ್ಗಿನಿಂದ ಮೋಡ ಕವಿದ

ವಾತಾವರಣ ಮುಂದುವರಿದಿದ್ದು ಮಳೆ ಮುಂದುವರಿಯುವ ಸೂಚನೆ ಇದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಮೇ 5ರವರೆಗೂ ರಾಜ್ಯದ ವಿವಿಧೆಡೆ ಮಳೆ ಮುಂದುವರಿಯುವುದಾಗಿ ತಿಳಿಸಿದೆ. ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ (ಗಂಟೆಗೆ 40ರಿಂದ 50 ಕಿ.ಮೀ. ವೇಗ) ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ಗಾಳಿಯೊಂದಿಗೆ ಒಂದರಿಂದ ಎರಡು ಸ್ಥಳಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಸಂಭವವಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!