5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಕೂಟದಿಂದ ಔಟ್..!

Picture of Savistara

Savistara

Bureau Report

ಚೆನ್ನೈ: ಪಂಜಾಬ್ ಕಿಂಗ್ಸ್ ತಂಡವು ಬುಧವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ನಾಲ್ಕು ವಿಕೆಟ್ ಅಂತರದ ಗೆಲುವು ದಾಖಲಿಸಿದೆ. ಇದರೊಂದಿಗೆ ಐದು ಬಾರಿಯ ಚಾಂಪಿಯನ್ ಚೆನ್ನೈ ಪ್ಲೇಆಪ್ ಕಾಣದೆ ಕೂಟದಿಂದಲೇ ನಿರ್ಗಮಿಸಿದೆ. ಪ್ರಸಕ್ತ ಸಾಲಿನಲ್ಲಿ ಚೆಪಾಕ್ ಮೈದಾನದಲ್ಲಿ ಚೆನ್ನೈ ಐದನೇ ಸೋಲು ಕಂಡಿದೆ. ಇದು ಆವೃತ್ತಿಯೊಂದರಲ್ಲಿ

ತವರಿನ ಅಂಗಳದಲ್ಲಿ ಚೆನ್ನೈನ ಕಳಪೆ ಸಾಧನೆಯಾಗಿದೆ. ಅಲ್ಲದೆ ಐಪಿಎಲ್ 2025ರಲ್ಲಿ ತವರಿನ ಅಂಗಳದಲ್ಲಿ ಸತತ ಐದನೇ ಸೋಲು ಕಂಡಿದೆ. ಇದೇ ಮೊದಲ ಬಾರಿಗೆ ಸತತವಾಗಿ ಎರಡನೇ ವರ್ಷವೂ ಐಪಿಎಲ್ ಪ್ಲೇ-ಆಫ್ ಪ್ರವೇಶಿಸುವಲ್ಲಿ ಚೆನ್ನೈ ವಿಫಲವಾಗಿದೆ. ಒಟ್ಟಾರೆಯಾಗಿ ಐದು ಬಾರಿದ ಚಾಂಪಿಯನ್ ಚೆನ್ನೈ ನಾಲ್ಕನೇ ಸಲ (2020, 2022, 2024, 2025) -ಆಫ್‌ಗೆ ಲಗ್ಗೆ ಇಡುವಲ್ಲಿ ವೈಫಲ್ಯ ಕಂಡಿದೆ. ಆಡಿರುವ 10 ಪಂದ್ಯಗಳ ಪೈಕಿ ಚೆನ್ನೈ ಕೇವಲ ಎರಡು ಜಯ ದಾಖಲಿಸಿ 4 ಅಂಕ ಪಡೆದಿದೆ. ಪ್ರಸಕ್ತ ಸಾಲಿನಲ್ಲಿ ಪ್ಲೇ-ಆಫ್ ರೇಸ್‌ನಿಂದ ಹೊರಬಿದ್ದಿರುವ ಮೊದಲ ತಂಡ ಸಿಎಸ್‌ಕೆ.ಈ ಗೆಲುವಿನೊಂದಿಗೆ ಆಡಿರುವ 10 ಪಂದ್ಯಗಳಲ್ಲಿ ಆರನೇ ಗೆಲುವು ದಾಖಲಿಸಿರುವ ಶ್ರೇಯಸ್ ಅಯ್ಯರ್ ಬಳಗವು, ಒಟ್ಟು 13 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟಿದೆ. ಪಂಜಾಬ್‌ನ ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು.

News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

[t4b-ticker]
error: Content is protected !!