ಹಿಂದೂಗಳ ಜೊತೆ ಹಿಂದೂಗಳೇ ನಿಲ್ಲಬೇಕು – 26 ಕುಟುಂಬಕ್ಕೆ ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ

Picture of Savistara

Savistara

Bureau Report

ಚಿಕ್ಕಮಗಳೂರು: ಕಾಶ್ಮೀರದ ಪೆಹಲ್ಗಾಮ್ ಬಳಿ (Pahalgam Attack) ನಡೆದ ಭಯೋತ್ಪಾದಕ ದಾಳಿಯನ್ನ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಶಾರದಾ ಮಠ (Sringeri Sharada Mutt) ಕಿರಿಯ ಶ್ರೀ ವಿಧುಶೇಖರ ಶ್ರೀಗಳು (Sri Vidhushekhara Bharati Swamiji) ಖಂಡಿಸಿದ್ದು, ಮೃತಪಟ್ಟಿರುವ 26 ಕುಟುಂಬಗಳಿಗೆ ಶೃಂಗೇರಿ ಮಠದಿಂದ ತಲಾ 2 ಲಕ್ಷ ರೂ. ಪರಿಹಾರವನ್ನು ಪ್ರಸಾದ ರೂಪದಲ್ಲಿ ನೀಡಲಾಗುವುದು ಎಂದು ಪ್ರಕಟಿಸಿದ್ದಾರೆ.

ಅಕ್ಷಯ ತೃತೀಯದ ಸಂದರ್ಭದಲ್ಲಿ ಮಾತನಾಡಿದ ಅವರು, ಉಗ್ರರ ದಾಳಿಗೆ ತಮ್ಮ ಮನೆಯವರನ್ನು ಕಳೆದುಕೊಂಡ ನೋವಿನಲ್ಲಿ 26 ಕುಟುಂಬಸ್ಥರು ಇದ್ದಾರೆ. ಹಿಂದೂಗಳ ಜೊತೆ ಹಿಂದೂಗಳೇ ನಿಲ್ಲಬೇಕು. ಹಾಗಾಗಿ ಶೃಂಗೇರಿ ಶಾರದಾ ಪೀಠದ ವತಿಯಿಂದ ಪ್ರತಿ ಕುಟುಂಬಕ್ಕೆ 2 ಲಕ್ಷ ರೂ. ಹಣವನ್ನು ಪ್ರಸಾದದ ರೂಪದಲ್ಲಿ ನೀಡುತ್ತಿದ್ದೇವೆ ಎಂದಿದ್ದಾರೆ.

ದುಃಖದಲ್ಲಿರುವ ಕುಟುಂಬದಲ್ಲಿ ಸಂತೋಷ, ಶ್ರೇಯಸ್ಸು ವೃದ್ಧಿಸಲಿ ಎಂದು ಶ್ರೀಗಳು ತಿಳಿಸಿದ್ದಾರೆ. ಈಗಾಗಲೇ ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಕರ್ನಾಟಕದ ನಾಗರೀಕರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿದ್ದಾರೆ. ಮಠದ ವತಿಯಿಂದಲೂ 26 ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳನ್ನು ಪ್ರಸಾದದ ರೂಪದಲ್ಲಿ ನೀಡಲಾಗುವುದು. ಮಠದ ಆಡಳಿತಾಧಿಕಾರಿ ಅದನ್ನ ನೋಡಿಕೊಂಡು ಆ ಕುಟುಂಬಗಳಿಗೆ ತಲುಪಿಸುತ್ತಾರೆ ಎಂದು ತಿಳಿಸಿದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!