ಯತ್ನಾಳ್ ಸವಾಲ್ ಸ್ವೀಕರಿಸಿದ ಶಿವಾನಂದ ಪಾಟೀಲ್! ಶಾಸಕ ಸ್ಥಾನಕ್ಕೆ ರಾಜೀನಾಮೆ, ಸ್ಪರ್ಧೆಗೆ ಸಿದ್ದ ಎಂದ ಸಚಿವ

Picture of Savistara

Savistara

Bureau Report

ರಾಜ್ಯ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ಸಚಿವ ಶಿವಾನಂದ ಪಾಟೀಲ್, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸವಾಲನ್ನು ಸ್ವೀಕರಿಸಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಯತ್ನಾಳ್ ರಾಜೀನಾಮೆ ನೀಡಿದರೆ ಮಾತ್ರ ನನ್ನ ರಾಜೀನಾಮೆ ಅಂಗೀಕರಿಸುವಂತೆ ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ. ಆದರೆ, ಸ್ಪೀಕರ್ ರಾಜೀನಾಮೆಯನ್ನು ಇನ್ನೂ ಅಂಗೀಕರಿಸಿಲ್ಲ.

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ನಿಟ್ಟಿನಲ್ಲಿ ಸ್ಪೀಕರ್ ಯು.ಟಿ ಖಾದರ್ ಅವರಿಗೆ ಪತ್ರ ರವಾನಿಸಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸವಾಲನ್ನು ಸ್ವೀಕಾರ ಮಾಡಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧೆಗೆ ಸಿದ್ಧ ಎಂದಿದ್ದಾರೆ.

ರಾಜೀನಾಮೆ ಪತ್ರದಲ್ಲಿ ಏನಿದೆ?ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್. ಪಾಟೀಲ (ಯತ್ನಾಳ್) ರವರು ತಮ್ಮ ವಿಜಯಪುರ ಮತಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ.

ನಾನು ಅವರ ಸವಾಲನ್ನು ಸ್ವೀಕರಿಸಿ. ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹಾಗಾಗಿ ನಾನು ಪ್ರತಿನಿಧಿಸುತ್ತಿರುವ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ.

ಆದುದರಿಂದ, ಶ್ರೀ ಬಸನಗೌಡ ಆರ್. ಪಾಟೀಲ್ (ಯತ್ನಾಳ್) ರವರು ಸವಾಲು ಹಾಕಿರುವಂತೆ ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ. ಅವರ ರಾಜೀನಾಮೆ ಅಂಗೀಕಾರವಾದರೆ ಮಾತ್ರ ದಯಮಾಡಿ ನನ್ನ ರಾಜೀನಾಮೆಯನ್ನೂ ಅಂಗೀಕರಿಸುವಂತೆ ತಮ್ಮಲ್ಲಿ ಕೋರುತ್ತೇನೆ.ಏನಿದು ವಿವಾದ?ಸಚಿವ ಶಿವಾನಂದ ಪಾಟೀಲ್ ವಿರುದ್ಧ ಬಸನಗೌಡ ಪಾಟೀಲ್‌ ಯತ್ನಾಳ್‌ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿ ‘ಶಿವಾನಂದ್ ಪಾಟೀಲ್ ಅವರಪ್ಪನಿಗೆ ಹುಟ್ಟಿದರೆ ನನ್ನ ವಿರುದ್ಧ ಸ್ಪರ್ಧೆ ಮಾಡಲಿ, ಅವರ ಮನೆ ಹೆಸರು ಪಾಟೀಲ್ ಅಲ್ಲ ಹಚಡದ ಎಂದು, ನಿಮ್ಮಪ್ಪ ನೀವು ಸೇರಿ ನಿಮ್ಮ ಅಡ್ಡ ಹೆಸರು ಬದಲಾಯಿಸಿಕೊಂಡಿದ್ದೀರಿ, ರಾಜಕಾರಣಕ್ಕಾಗಿ ಪಾಟೀಲ್ ಎಂದು ಮಾಡಿಕೊಂಡಿದ್ದಾರೆಂದು’ ಹೇಳಿಕೆ ನೀಡಿದ್ದರು.

ಅಂಗೀಕಾರ ಆಗದ ರಾಜೀನಾಮೆಸಚಿವ ಶಿವಾನಂದ ಪಾಟೀಲ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರ ನೀಡಿದರೂ ಸ್ಪೀಕರ್ ಅದನ್ನು ಅಂಗೀಕಾರ ಮಾಡಿಲ್ಲ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!