ಮಂಗಳೂರು: ಮುಸ್ಲಿಮರ ವಿರುದ್ಧ ದ್ವೇಷ ಭಾಷಣ: ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

Picture of Savistara

Savistara

Bureau Report

ಬೆಳ್ತಂಗಡಿ: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ ಅವರು ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ. ಶನಿವಾರ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪೂಂಜಾ ಅವರು ಮುಸ್ಲಿಂ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.ತೆಕ್ಕಾರು ಗ್ರಾಮದ ಮುಸ್ಲಿಮರು ದೇವಸ್ಥಾನದಲ್ಲಿ ಅಳವಡಿಸಲಾದ ಟ್ಯೂಬ್‌ಲೈಟ್‌ಗಳನ್ನು ಒಡೆದು ಡೀಸೆಲ್ ಕದಿಯುತ್ತಾರೆ ಎಂದು ಪೂಂಜಾ ಹೇಳಿದ್ದಾರೆ ಎನ್ನಲಾಗಿದೆ. ಈ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಅಲ್ಲದೇ ತಮ್ಮ ಭಾಷಣ ಪೂರ್ತಿ ಮಸ್ಲಿಂ ದ್ವೇಷವನ್ನೇ ಕಾರಿದ್ದು, ಜಿಲ್ಲೆಯ ಸಾಮರಸ್ಯ ಕದಡುವಂತೆ ಮಾತನಾಡಿದ್ದಾರೆಂದು ಆರೋಪಿಸಲಾಗಿದೆ.ಈ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

[t4b-ticker]
error: Content is protected !!