ಸ್ಟೈಪಂಡ್ ಹಗರಣ: ಕಲಬುರಗಿಯ 7 ಕಡೆಗಳಲ್ಲಿ ಇ.ಡಿ ದಾಳಿ

Picture of Savistara

Savistara

Bureau Report

ಮಹಾದೇವಪ್ಪ ರಾಂಪುರೆ ವೈದ್ಯಕೀಯ ಕಾಲೇಜು ಸ್ಟೈಪಂಡ್ ಹಗರಣದ ತನಿಖೆ ಸಂಬಂಧ ಕಲಬುರಗಿಯ ವಿವಿಧೆಡೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಲಬುರಗಿ: ಮಹಾದೇವಪ್ಪ ರಾಂಪುರೆ ವೈದ್ಯಕೀಯ ಕಾಲೇಜು ಸ್ಟೈಪಂಡ್ ಹಗರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ಮಾಜಿ ಅಧ್ಯಕ್ಷ ಭೀಮಾಶಂಕರ್ ಬಿಲ್‌ಗುಂದಿ ಅವರ ಮನೆ ಸೇರಿದಂತೆ ಏಳು‌ ಕಡೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ಮಾಡಿದ್ದಾರೆ.ಭೀಮಾಶಂಕರ ಬಿಲಗುಂದಿ, ಎಂಆರ್‌ಎಂಸಿ ವೈದ್ಯಕೀಯ ಕಾಲೇಜಿನ ಮಾಜಿ ಡೀನ್ ಡಾ. ಎಸ್.ಎಂ. ಪಟೇಲ್ ಮತ್ತು ಮಹಾದೇವಪ್ಪ ರಾಂಪುರೆ ವೈದ್ಯಕೀಯ ಕಾಲೇಜು ಲೆಕ್ಕಪರಿಶೋಧಕ ಸುಭಾಷ್ ಚಂದ್ರ ಅವರ ಸಂಬಂಧಿತ ಸ್ಥಳಗಳು ಸೇರಿದಂತೆ ಕಲಬುರಗಿಯ ಜಿಲ್ಲೆಯ 7 ಕಡೆಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ ಎಂದು ಇ.ಡಿ ಅಧಿಕಾರಿಗಳು ಮಾಹಿತಿ ನೀಡಿದ್ಧಾರೆ.

ಪಿಎಂಎಲ್‌ಎ, 2002ರ ನಿಬಂಧನೆಗಳ ಅಡಿಯಲ್ಲಿ ದಾಳಿ ನಡೆಸಲಾಗಿದೆ. ಏಪ್ರಿಲ್​ 30, ಮೇ 1ಹಾಗೂ 3ರಂದು ಒಟ್ಟೂ ಮೂರು ದಿನ ಶೋಧ ಕಾರ್ಯಾಚರಣೆ ನಡೆದಿದೆ. ಈ ವೇಳೆ ಎಲೆಕ್ಟ್ರಾನಿಕ್ ದಾಖಲೆಗಳ ರೂಪದಲ್ಲಿ ವಿವಿಧ ದೋಷಾರೋಪಣೆಯ ಪುರಾವೆಗಳು ಕಂಡು ಬಂದಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ.

[t4b-ticker]
error: Content is protected !!