ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮಹೇಶ್ ಕುಮಾ‌ರ್ ಕರಿಕ್ಕಳ ಆಯ್ಕೆ: ಮೇ.12ರಂದು ನೂತನ ವ್ಯವಸ್ಥಾಪನಾ ಸಮಿತಿ ಅಧಿಕಾರ ಸ್ವೀಕಾರ

Picture of Savistara

Savistara

Bureau Report

ಸುಳ್ಯ: ರಾಜ್ಯದ ನಂ.1 ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಮಹೇಶ್ ಕುಮಾರ್ ಕರಿಕ್ಕಳ ಆಯ್ಕೆಯಾಗಿದ್ದಾರೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರ ಪಟ್ಟಿ ಅಂತಿಮಗೊಂಡಿದ್ದು ಮೇ.12ರಂದು ಸೋಮವಾರ ಬೆಳಿಗ್ಗೆ 10 ಗಂಟೆಗೆ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು

ಅಧಿಕಾರ ವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ಸಂಜೆ ಮಂಗಳೂರಿನಲ್ಲಿ ಕಾಂಗ್ರೆಸ್‌ನ ಹಿರಿಯ ಮುಖಂಡರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ತಿಳಿದು ಬಂದಿದೆ.ಅಧ್ಯಕ್ಷತೆಗೆ ಆಕಾಂಕ್ಷೆಗಳ ಸಂಖ್ಯೆ ಹೆಚ್ಚಿದ್ದ ಹಿನ್ನಲೆಯಲ್ಲಿ ಕಾಂಗ್ರೆಸ್ ಜಿಲ್ಲಾ ಮುಖಂಡರು ಸಭೆ ನಡೆಸಿ ಅಧ್ಯಕ್ಷತೆ ವಿಚಾರದಲ್ಲಿ ಸಮನ್ವತೆ ಸಾಧಿಸಿದ ಬಳಿಕಈ ನಿರ್ಧಾರ ಕೈಗೊಳ್ಳಲಾಯಿತು ಎಂದು ತಿಳಿದು ಬಂದಿದೆ.ಸೋಮವಾರ ಅಧಿಕಾರ ವಹಿಸಿಕೊಳ್ಳಲಾಗುವುದು ಎಂದು ಮಹೇಶ್ ಕುಮಾ‌ರ್ ಕರಿಕ್ಕಳ ಅವರು ಖಚಿತಪಡಿಸಿದ್ದಾರೆ.ಡಾ.ಬಿ.ರಘು, ಅಶೋಕ್ ನೆಕ್ರಾಜೆ, ಮಹೇಶ್ ಕುಮಾರ್ ಕರಿಕ್ಕಳ, ಹರೀಶ್ ಇಂಜಾಡಿ, ಲೀಲಾ ಮನಮೋಹನ, ಪ್ರವೀಣ ಮರುವಂಜ, ಸೌಮ್ಯ ಭರತ್‌, ಅಜಿತ್ ಅವರು ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಮಹೇಶ್‌ಕುಮಾ‌ರ್ ಕರಿಕ್ಕಳ ಈ ಹಿಂದೆ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!