ಪ್ರಧಾನಿ ಮೋದಿಯನ್ನು ಶೆಹಬಾಜ್ ಷರೀಫ್‌ ಜತೆ ಹೋಲಿಸಿದ್ದಾರೆ: ಕಾಂಗ್ರೆಸ್ ಟೀಕೆ

Picture of Savistara

Savistara

Bureau Report

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಕದನವಿರಾಮಕ್ಕೆ ಯಶಸ್ವಿಯಾಗಿ ಮಧ್ಯಸ್ಥಿಕೆ ವಹಿಸಲಾಗಿದೆ ಎಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರು ಎರಡೂ ದೇಶಗಳ ನಡುವಿನ ವ್ಯತ್ಯಾಸವನ್ನು ಎತ್ತಿ ತೋರಿಸುವುದಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರೊಂದಿಗೆ ಹೋಲಿಸುತ್ತಿದ್ದಾರೆ ಎಂದು ಮಂಗಳವಾರ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸಿದೆ.ಸೌದಿ ಅರೇಬಿಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಟ್ರಂಪ್‌ ಅವರ ಹೇಳಿಕೆಗಳ ತುಣುಕನ್ನು ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಹಂಚಿಕೊಂಡಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಾನು ಒಪ್ಪಂದ ಮಾಡಿಕೊಳ್ಳಲು ವ್ಯಾಪಾರ ಬಳಸಿದೆ, ಅವರು ಒಪ್ಪಿಕೊಂಡರು ಎಂದು ಮತ್ತೊಮ್ಮೆ ಹೇಳಿದ್ದಾರೆ; ಭಾರತವನ್ನು ಪಾಕಿಸ್ತಾನದೊಂದಿಗೆ ಸಮ ಮಾಡುವುದಲ್ಲದೆ, ಪ್ರಧಾನಿ ಮೋದಿಯನ್ನು ಶೆಹಬಾಜ್ ಷರೀಫ್ ಅವರೊಂದಿಗೆ ಹೋಲಿಸುತ್ತಿದ್ದಾರೆ” ಎಂದು ಶೀರ್ಷಿಕೆಯಲ್ಲಿ ಹೇಳಿ, ಪ್ರಧಾನಿ ಕಾರ್ಯಾಲಯಕ್ಕೆ ಈ ಹೇಳಿಕೆ ಸ್ವೀಕಾರಾರ್ಹವೇ ಎಂದು ಪ್ರಶ್ನಿಸಿದ್ದಾರೆ.

ವೃತ್ತಿಪರರ ಕಾಂಗ್ರೆಸ್‌ ಮತ್ತು ಡೇಟಾ ಅನಾಲಿಟಿಕ್ಸ್‌ ಅಧ್ಯಕ್ಷ ಪ್ರವೀಣ್ ಚಕ್ರವರ್ತಿ ‘ಪಾಕಿಸ್ತಾನದ ಪ್ರಧಾನಿ ಮತ್ತು ಭಾರತದ ಪ್ರಧಾನಿ ಸಮಾನರು. ಪಾಕಿಸ್ತಾನ ಮತ್ತು ಭಾರತ ಸಮಾನ ಶಕ್ತಿಗಳು.. ಇದನ್ನು ಯಾರು ಹೇಳುತ್ತಿದ್ದಾರೆ? ಪ್ರಧಾನಿ ಮೋದಿಯವರ ‘ಒಳ್ಳೆಯ ಸ್ನೇಹಿತ’ ಅಧ್ಯಕ್ಷ ಟ್ರಂಪ್” ಎಂದು ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಕೂಡ ಸೌದಿ ಅರೇಬಿಯಾದಲ್ಲಿ ಟ್ರಂಪ್ ಅವರ ಹೇಳಿಕೆಗಳನ್ನು ಎಕ್ಸ್ ನಲ್ಲಿ ಹಂಚಿಕೊಂದು ಕೇಂದ್ರ ಸರಕಾರವನ್ನು ಟೀಕಿಸಿದ್ದಾರೆ.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!