ಮಣಿಪುರ | 10 ಉಗ್ರರ ಹತ್ಯೆ; ಮುಂದುವರಿದ ಕಾರ್ಯಾಚರಣೆ

Picture of Savistara

Savistara

Bureau Report

ಇಂಫಾಲ: ಮಣಿಪುರದ ಚಂದೇಲ್ ಜಿಲ್ಲೆಯಲ್ಲಿ ಉಗ್ರರು ಮತ್ತು ಅಸ್ಸಾಂ ರೈಫಲ್ಸ್ ಘಟಕದೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 10 ಮಂದಿ ಉಗ್ರರು ಹತರಾಗಿದ್ದಾರೆ.

ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಈ ಕುರಿತು ಸೇನೆಯ ಪೂರ್ವ ಕಮಾಂಡ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ‘ಭಾರತ-ಮ್ಯಾನ್ಮಾ‌ರ್ ಗಡಿಗೆ ಸಮೀಪವಿರುವ ಚಂದೇಲ್ ಜಿಲ್ಲೆಯ ಖೆಂಗ್‌ಜಾಯ್ ತಹಸಿಲ್‌ನ ನ್ಯೂ ಸಮ್ರಾಲ್ ಗ್ರಾಮದ ಬಳಿ ಉಗ್ರರ ಚಲನವಲನಗಳ ಬಗ್ಗೆ ಗುಪ್ತಚರ ಅಧಿಕಾರಿಗಳು ನೀಡಿದ ಖಚಿತ ಮಾಹಿತಿ ಆಧರಿಸಿ ಅಸ್ಸಾಂ ರೈಫಲ್ಸ್ ಘಟಕವು ಮೇ 14 ರಂದು (ಬುಧವಾರ) ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಈ ವೇಳೆ ಶಂಕಿತರೊಂದಿಗೆ ಗುಂಡಿನ ಚಕಮಕಿ ನಡೆದಿದ್ದು, ಸೇನಾ ಪಡೆ ತಕ್ಕ ಪ್ರತ್ಯುತ್ತರ ನೀಡಿದೆ. ಒಟ್ಟು 10 ಮಂದಿ ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!