ಶಿವಮೊಗ್ಗ ಜನತೆಗೆ ಮತ್ತೊಂದು ಸಂತಸ ಸುದ್ದಿ | ಭಧ್ರಾವತಿ ಯಿಂದ ಚಿಕ್ಕಜಾಜೂರು ನೂತನ ರೈಲ್ವೆ ಕಾಮಗಾರಿಗೆ ಸರ್ವೇ ಮಾಡಲು ರೈಲ್ವೆ ಇಲಾಖೆ ಆದೇಶ | ರೈಲ್ವೆ ಸಚಿವರಿಗೆ ಸಂಸದ ಬಿವೈ ರಾಘವೇಂದ್ರ ಅಭಿನಂದನೆ

Picture of Savistara

Savistara

Bureau Report

ಶಿವಮೊಗ್ಗ ಜನತೆಗೆ ಮತ್ತೊಂದು ಸಂತಸ ಸುದ್ದಿ….!!! ಭದ್ರಾವತಿಯಿಂದ ಚಿಕ್ಕಜಾಜೂರುವರೆಗೆ ನೂತನ ರೈಲ್ವೆ ಮಾರ್ಗದ ಕಾಮಗಾರಿಯನ್ನು ಶೀಘ್ರವೇ ಆರಂಭಿಸುವ ದೃಷ್ಠಿಯಿಂದ, ಈ ರೈಲ್ವೆ ಮಾರ್ಗದ ಅಂತಿಮ ಸರ್ವೆ ಮಾಡಲು ಆದೇಶ ಹೊರಡಿಸಲಾಗಿದೆ.ಈ ಒಂದು ಹೊಸ ಮೈಲಿಗಲ್ಲು ಸ್ಥಾಪಿತವಾದ ನಂತರ ನಮ್ಮ ಮಲೆನಾಡು ಭಾಗಕ್ಕೆ ಬಯಲು ಸೀಮೆ ಹಾಗೂ ಅರೆ ಮಲೆನಾಡು ಭಾಗಗಳ ಸಂಪರ್ಕ ಸಾಧ್ಯತೆಯಿಂದ ವ್ಯಾಪಾರ, ವ್ಯವಹಾರ, ಪ್ರವಾಸೋದ್ಯಮ, ಕೈಗಾರಿಕೆ ಹಾಗೂ ವಾಣಿಜ್ಯೋದ್ಯಮಕ್ಕೆ ಹೆಚ್ಚಿನ ಬಲ ದೊರೆಯುತ್ತದೆ ಇದರೊಂದಿಗೆ ಮಲೆನಾಡಿನ ಆರ್ಥಿಕ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣವಾಗುತ್ತದೆ.ಜೊತೆಗೆ ಮಲೆನಾಡಿಗೆ ರಾಜ್ಯದ ಎಲ್ಲಾ ಮೂಲೆಗಳಿಗೆ ಉತ್ತಮ ಸಂಪರ್ಕ ದೊರೆಯುವ ಮೂಲಕ ಜನಸಾಮಾನ್ಯರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಪೂರಕವಾಗುತ್ತದೆ. ಬಂಡವಾಳ ಹೂಡಿಕೆಗೆ ಉತ್ತಮ ವಾತಾವರಣ ಕೂಡ ನಿರ್ಮಾಣವಾಗುತ್ತದೆ. ಈ ಎಲ್ಲ ದೂರದೃಷ್ಟಿ ಇಟ್ಟುಕೊಂಡು ರಾಜ್ಯದಲ್ಲಿ ರೈಲ್ವೆ ಮೂಲಸೌಕರ್ಯಗಳ ಹೆಚ್ಚಳ ಹಾಗೂ ನೂತನ ರೈಲ್ವೆ ಮಾರ್ಗಗಳ ನಿರ್ಮಾಣಕ್ಕೆ ಬೆಂಬಲವಾಗಿ ನಿಂತಿರುವ ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ, ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಹಾಗೂ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರಿಗೆ ಶಿವಮೊಗ್ಗ ಜನತೆಯ ಪರವಾಗಿ ಸಂಸದ ಬಿವೈ ರಾಘವೇಂದ್ರ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ

ಈ ಎಲ್ಲ ದೂರದೃಷ್ಟಿ ಇಟ್ಟುಕೊಂಡು ರಾಜ್ಯದಲ್ಲಿ ರೈಲ್ವೆ ಮೂಲಸೌಕರ್ಯಗಳ ಹೆಚ್ಚಳ ಹಾಗೂ ನೂತನ ರೈಲ್ವೆ ಮಾರ್ಗಗಳ ನಿರ್ಮಾಣಕ್ಕೆ ಬೆಂಬಲವಾಗಿ ನಿಂತಿರುವ ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ, ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಹಾಗೂ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರಿಗೆ ಶಿವಮೊಗ್ಗ ಜನತೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ. ರಾಘವೇಂದ್ರ ಹೇಳಿದರು.

[t4b-ticker]
error: Content is protected !!