ಮಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 16ರಂದು ಮಂಗಳೂರಿಗೆ ಆಗಮಿಸಲಿದ್ದು ನಗರದ ಉರ್ವಾ ಮಾರ್ಕೆಟ್‌ನಲ್ಲಿ ನಿರ್ಮಾಣಗೊಂಡಿರುವ ಒಳಾಂಗಣ ಕ್ರೀಡಾಂಗಣವನ್ನು ಉದ್ಘಾಟನೆ. ನಂತರ ಸಂಜೆ 4:15 ಕ್ಕೆ ಪಡೀಲ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ನೂತನ ಕಚೇರಿ “ಪ್ರಜಾಸೌಧ” ಉದ್ಘಾಟನೆ, ಐತಿಹಾಸಿಕ ದರ್ಖಾಸ್ತು ಪೋಡಿ ಅಭಿಯಾನದ ಅಂಗವಾಗಿ 8000 ಮಂದಿಗೆ ಆರ್.ಟಿ.ಸಿ ವಿತರಣೆ, ಗುರುಪುರ ನಾಡಕಚೇರಿ ಉದ್ಘಾಟನೆ, ಸಣ್ಣ ನೀರಾವರಿ ಇಲಾಖೆ ಕಛೇರಿ ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ, ವಿವಿಧ ಸರಕಾರಿ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 6:30ಕ್ಕೆ 5 ವರ್ಷಗಳಿಗೊಮ್ಮೆ ನಡೆಯುವ ಸೈಯದ್ ಮುಹಮ್ಮದ್ ಶರೀಫುಲ್ ಮದನಿ ದರ್ಗಾ ಉರೂಸ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಮುಖ್ಯಮಂತ್ರಿಗಳೊಂದಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಜೊತೆಗಿರುವರು, ಈ ಹಿನ್ನೆಲೆಯಲ್ಲಿ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆದುಕೊಂಡು ಬರುವಂತೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು ಕೆಯಸ್ ಆರ್ ಟಿಸಿ ಬಸ್ ಗಳನ್ನು ಬಳಸಿಕೊಳ್ಳುವಂತೆ ಸೂಚಿಸಲಾಗಿದೆ ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.












































