ಮೇ 18 ರವರೆಗೆ ಭಾರತ – ಪಾಕ್ ಕದನ ವಿರಾಮ ವಿಸ್ತರಣೆ

Picture of Savistara

Savistara

Bureau Report

ಹೊಸದಿಲ್ಲಿ: ಭಾರತ ಮತ್ತು ಪಾಕಿಸ್ತಾನಗಳು ಮೇ 10ರಂದು ನಿರ್ಧರಿಸಿದಂತೆ ಎಲ್ಲಾ ಗಡಿಯಾಚೆಗಿನ ಮಿಲಿಟರಿ ಕಾರ್ಯಾಚರಣೆಗಳ ಮೇಲೆ ವಿರಾಮವನ್ನು ವಿಸ್ತರಿಸಲು ಒಪ್ಪಿಕೊಂಡಿವೆ. ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಎರಡೂ ದೇಶಗಳ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (DGMOs) ವಿಶ್ವಾಸ ವೃದ್ಧಿ ಕ್ರಮಗಳನ್ನು ಮುಂದುವರಿಸಲು ನಿರ್ಧರಿಸಿದ್ದಾರೆ.“ಮೇ 10, 2025 ರಂದು ಇಬ್ಬರು ಡಿಜಿಎಂಒಗಳ ನಡುವಿನ ತಿಳುವಳಿಕೆಯ ಜೊತೆಗೆ, ಜಾಗರೂಕತೆಯ ಮಟ್ಟವನ್ನು ಕಡಿಮೆ ಮಾಡಲು ವಿಶ್ವಾಸ ವೃದ್ಧಿ ಕ್ರಮಗಳನ್ನು ಮುಂದುವರಿಸಲು ನಿರ್ಧರಿಸಲಾಗಿದೆ” ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.ಪಿಟಿಐ ವರದಿಯ ಪ್ರಕಾರ, ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್, ಪಾಕಿಸ್ತಾನದ ಡಿಜಿಎಂಒ ಮೇಜ‌ರ್ ಜನರಲ್ ಕಾಶಿಫ್ ಅಬ್ದುಲ್ಲಾ ಮತ್ತು ಭಾರತದ ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಅವರು ಗುರುವಾರ ಹಾಟ್‌ಲೈನ್‌ನಲ್ಲಿ ಕದನ ವಿರಾಮದ ಬಗ್ಗೆ ಚರ್ಚಿಸಿದ್ದಾರೆ ಎಂದು ಹೇಳಿಕೊಂಡಿದ್ದು, ಈಗ ಕದನ ವಿರಾಮವನ್ನು ಮೇ 18 ರವರೆಗೆ ವಿಸ್ತರಿಸಲಾಗಿದೆ.

ಪಹಲ್ಲಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಮೇ 7 ರ ಮಧ್ಯರಾತ್ರಿಯ ನಂತರ ಭಾರತವು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂದೂರ್ ಆರಂಭಿಸಿತ್ತು.ಒಂದು ದಿನದ ನಂತರ, ಪಾಕಿಸ್ತಾನವು ಗಡಿಯ ಸಮೀಪವಿರುವ ಸೇನಾ ನೆಲೆಗಳ ಮೇಲೆ ಡೋನ್ ಮತ್ತು ಕ್ಷಿಪಣಿ ದಾಳಿಯನ್ನು ನಡೆಸಿದ ನಂತರ, ಭಾರತ ಅದನ್ನು ವಿಫಲಗೊಳಿಸಿತು. ಇದಾದ ನಂತರ ದೇಶಗಳ ನಡುವಿನ ಉದ್ವಿಗ್ನತೆ ತೀವ್ರಗೊಂಡಿತು.

[t4b-ticker]
error: Content is protected !!