ಕರಾವಳಿಯ ದೈವಾರಾಧನೆಯ ಪರಂಪರೆ ನಾಡಿನ ಧಾರ್ಮಿಕ ಹಾಗೂ ಸಾಂಸ್ಕೃತಿಕ ಹೊನ್ನ ಕಲಶವಿದ್ದಂತೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ

Picture of Savistara

Savistara

Bureau Report

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೇವಸ್ಥಾನ, ಶ್ರೀ ಗುಳಿಗ ದೈವ ಹಾಗೂ ಕೊರಗಜ್ಜ ದೇವಸ್ಥಾನದಲ್ಲಿ ಆಯೋಜಿಸಿದ್ದ ಶ್ರೀ ಕೊರಗಜ್ಜ ದೈವದ ನೇಮ ಮತ್ತು ಪರಿವಾರ ದೈವಗಳಿಗೆ ತಂಬಿಲ ಸೇವಾ ಕಾರ್ಯದಲ್ಲಿ ಭಾಗವಹಿಸಿ ಗುಳಿಗ ದೈವದ ಆಶೀರ್ವಾದ ಪಡೆಯಲಾಯಿತು. ತುಳುನಾಡಿನ ಆರಾಧನಾ ಪರಂಪರೆಯಲ್ಲಿ ದೈವದ ಆರಾಧನೆಗೆ ಪರಮಪವಿತ್ರ ಆಚರಣೆಯಲ್ಲಿ ರಾಷ್ಟ್ರದ ಅಭಿವೃದ್ಧಿ ಹಾಗೂ ಸುಭದ್ರತೆಗಾಗಿ ಮೂರನೇ ಬಾರಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಯವರು ಪ್ರಧಾನಿಗಳಾಗಿ ಆಯ್ಕೆಯಾಗಲೆಂದು ನಮ್ಮ ಕಾರ್ಯಕರ್ತರು ಸಂಕಲ್ಪ ಮಾಡಿಕೊಂಡಿದ್ದ ವಿಶೇಷ ಹರಕೆಯ ಶ್ರೀ ಕೊರಗಜ್ಜ ದೈವದ ನೇಮ ಮತ್ತು ಪರಿವಾರ ದೈವಗಳಿಗೆ ತುಂಬಿಲಸೇವೆ ಸಲ್ಲಿಸಿ ದೈವದ ಕೃಪೆಗೆ ಪಾತ್ರರಾದೆವು. ಶ್ರೀ ದೈವದ ಪ್ರಸಾದವನ್ನು ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರಿಗೆ ತಲುಪಿಸಲಿದ್ದೇವೆ. ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಎಸ್.ಅಂಗಾರ, ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಶ್ರೀ ಹರೀಶ್ ಪೂಂಜಾ, ಸಂಸದರಾದ ಶ್ರೀ ಕ್ಯಾಪ್ಟನ್ ಬ್ರಿಜೇಶ್ ಚೌಟ , ಶಾಸಕರಾದ ಕು ಭಾಗೀರಥಿ ಮರುಳ್ಯ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು, ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಲ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮಂಡಲ ಮತ್ತು ಶಕ್ತಿಕೇಂದ್ರ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!