ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಉಲ್ಟಾ ಹೊಡೆದ ಡಿಕೆಶಿ

Picture of Savistara

Savistara

Bureau Report

ಬಳ್ಳಾರಿ: ಗೃಹಲಕ್ಷ್ಮಿ ಹಣವನ್ನ ಪ್ರತಿ ತಿಂಗಳೂ… ಕೊಡ್ತೀವಿ ಅಂತ ಹೇಳಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ (DK Shivakumar) ಉಲ್ಟಾ ಹೊಡೆದಿದ್ದಾರೆ.

ಬಳ್ಳಾರಿಯಲ್ಲಿ ಕಾಂಗ್ರೆಸ್‌ ಸಾಧನಾ ಸಮಾವೇಶ ಕುರಿತ ಸುದ್ದಿಗೋಷ್ಠಿಯಲ್ಲಿ, ಗೃಹಲಕ್ಷ್ಮಿ ಹಣ (Gruhalakshmi Scheme Money) ಯಾವಾಗ ಬರುತ್ತೆ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ನೋಡ್ರಿ ತಿಂಗಳು ತಿಂಗಳು ಹಣ ಕೊಡ್ತೀವಿ ಅಂತ ನಾವು ಹೇಳಿಲ್ಲ. ನೀವು ಟ್ಯಾಕ್ಸ್‌ ಕಟ್ಟುತ್ತಾ ಇರಬೇಕು.. ನಾವು ದುಡ್ಡು ಕೊಡ್ತಾ ಇರಬೇಕು. ಈಗ ಗುತ್ತಿಗೆ ಕೆಲಸ ಮಾಡುವವರಿಗೆ ನಾಳೆನೇ ಹಣ ಬಂದುಬಿಡುತ್ತಾ? 2, 3, 5 ವರ್ಷ ಆಗುತ್ತೆ ಅಲ್ವಾ.. ಅದೇ ರೀತಿ ಇದೂ ಕೂಡ ಬಂದಾಗ ಬರುತ್ತೆ ಅಂತ ಹಾರಿಕೆ ಉತ್ತರ ನೀಡಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆ ವಿಪಕ್ಷ ಟೀಕೆ ಕುರಿತು ಮಾತನಾಡಿದ ಅವರು, ನಾನೇನು ಹಂಪಿ ಟೂರ್ ಮಾಡೋಕೆ ಬಂದಿದ್ದೇನಾ? ಕುಮಾರಸ್ವಾಮಿ, ಅಶೋಕ್‌ಗೆ ಟೀಕೆ ಮಾಡದೇ ಇರೋಕೆ ಅಗುತ್ತಾ? ಅಂತ ತಿರುಗೇಟು ಕೊಟ್ಟಿದ್ದಾರೆ.

ಇನ್ನೂ ಗ್ರೇಟರ್ ಬೆಂಗಳೂರು ಮಾಡಿ ರಿಯಲ್ ಎಸ್ಟೇಟ್ ಮಾಫಿಯಾ ಮಾಡ್ತಿದ್ದಾರೆ ಎಂಬ ವಿಪಕ್ಷ ನಾಯಕರ ಆರೋಪಕ್ಕೆ ಉತ್ತರಿಸಿ, ನಮ್ಮದು ಕಾಂಗ್ರೆಸ್ ಗ್ಯಾರಂಟಿ, ಅದ್ರೆ ಬಿಜೆಪಿಯದ್ದು ಪಕ್ಷದ ಗ್ಯಾರಂಟಿ ಅಲ್ಲ, ಮೋದಿಯ ಗ್ಯಾರಂಟಿ. ನಮ್ಮ ಗ್ಯಾರಂಟಿಯನ್ನೇ ಬಿಜೆಪಿ ಸರ್ಕಾರದಲ್ಲಿ ಅನುಕರಣೆ ಮಾಡ್ತಿದ್ದಾರೆ. ನರೇಗಾ ಟೀಕೆ ಮಾಡ್ತಿದ್ರು, ಅದನ್ನು ತೆಗೆಯೋಕೆ ಅಗಿದೆಯಾ? ಉಳುವವನೆ ಭೂಮಿಯ ಒಡೆಯ ತೆಗೆಯೋಕೆ ಆಯ್ತಾ? ಟೀಕೆ ಸಾಯ್ತವೆ ಕೆಲಸ ಉಳಿಯುತ್ತವೆ ಎಂದು ಹೇಳಿದರು.

ತೆಲಂಗಾಣ ಸಿಎಂ ಗ್ಯಾರಂಟಿ ಹೊರೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಇದು ಅವರ ರಾಜ್ಯಕ್ಕೆ ಬಿಟ್ಟ ವಿಚಾರ ಅಂತ ಜಾರಿಕೊಂಡರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!