ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮೇ 20, 21ಕ್ಕೆ ಭಾರೀ ಮಳೆ ?; ರೆಡ್ ಅಲರ್ಟ್ ಘೋಷಣೆ

Picture of Savistara

Savistara

Bureau Report

ಮೀನುಗಾರಿಕೆಗೆ ತೆರಳದಂತೆ ಸೂಚನೆ, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಡಿಸಿ ಮುಲ್ಲೈ ಮುಗಿಲನ್ ಆದೇಶ

ಮಂಗಳೂರು/ಉಡುಪಿ: ಅರಬ್ಬಿ ಸಮುದ್ರದಲ್ಲಿವಾಯುಭಾರ ಕುಸಿತದಿಂದ ಮೇ 22ರವರೆಗೂ ಗಾಳಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದ್ದು, ಅದರಂತೆ ಮೇ 20, 21ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು, ಸಿಡಿಲು, ಗಾಳಿಯಿಂದ ಕೂಡಿದ ಭಾರೀ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ. ಇದರಿಂದ ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಮಳೆ ಬಿರುಸು ಪಡೆಯಲಿದೆ.ಜಿಲ್ಲೆಯಾದ್ಯಂತ ಸೋಮವಾರ ಮಧ್ಯಾಹ್ನ ಬಳಿಕವೇ ಉತ್ತಮ ಮಳೆಯಾಗುತ್ತಿದ್ದು, ಬಿರುಸಿನ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ನೀರು ನುಗ್ಗುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸಬೇಕು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು, ವಿಪತ್ತು

ನಿರ್ವಹಣೆಯ ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮು ಮುಗಿಲನ್ ಆದೇಶದಲ್ಲಿ ಸೂಚಿಸಿದ್ದಾರೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ:

ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ಇನ್ಸಿಡೆಂಟ್ ಕಮಾಂಡರ್ ಜಾಗೃತರಾಗಿ, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕಾ ದೋಣಿಗಳು ಕೂಡಲೇ ದಡ ಸೇರಬೇಕು ಎಂದು ಸೂಚನೆ ನೀಡಲಾಗಿದೆ.ಪ್ರವಾಸಿಗರು, ಸಾರ್ವಜನಿಕರು ನದಿ ತೀರಕ್ಕೆ. ಸಮುದ್ರ ತೀರಕ್ಕೆ ತೆರಳಬಾರದು. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರ ತೆರೆದು ಸನ್ನದ್ದ ಸ್ಥಿತಿಯಲ್ಲಿರಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಉಡುಪಿಯಲ್ಲೂ ರೆಡ್ ಅಲರ್ಟ್ ಘೋಷಣೆ

ಸೋಮವಾರ ಉಡುಪಿ ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗದಲ್ಲಿ ಸಾಧಾರಣ ಮಳೆಯಾಗಿದೆ. ಮೇ 20ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್‌ ಅಲರ್ಟ್ ಘೋಷಣೆ ಮಾಡಲಾಗಿದೆ.ಸೋಮವಾರ ಬೆಳಗ್ಗೆ ಮಲ್ಪೆ ಕಡಲ ತೀರದಲ್ಲಿ ಉತ್ತಮ ಮಳೆಗಿದೆ. ಆದಿ ಉಡುಪಿ, ಬನ್ನಂಜೆಯವರೆಗೂ ಮಳೆ ಸುರಿದಿದ್ದು, ಸಿಟಿ ಬಸ್‌ನಿಲ್ದಾಣದಿಂದ ಮಣಿಪಾಲ ಕಡೆಗೆ ಮಳೆ ಆಗಿರಲಿಲ್ಲ. ಸಂಜೆ ಮೋಡಕವಿದ ವಾತಾವರಣದೊಂದಿಗೆ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ.

ಮೀನುಗಾರರಿಗೆ ಸೂಚನೆ

ವಾಯುಭಾರ ಕುಸಿತದಿಂದ ಜಿಲ್ಲೆಯ ಕರಾವಳಿ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು ಮೀನುಗಾರರು ಮೀನುಗಾರಿಕೆಗೆ ಹೋಗುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಪ್ರಕಟನೆ ತಿಳಿಸಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!