ಹುಬ್ಬಳ್ಳಿ ಮಸೀದಿಗಳಲ್ಲಿ ಅಪರಿಚಿತ ವ್ಯಕ್ತಿಗಳು – ಮುಸ್ಲಿಮರೇ ಆತಂಕ ವ್ಯಕ್ತಪಡಿಸಿದ್ದಾರೆ ಎಂದ ಟೆಂಗಿನಕಾಯಿ

Picture of Savistara

Savistara

Bureau Report

ಧಾರವಾಡ: ಹುಬ್ಬಳ್ಳಿಯ (Hubballi) ವಿವಿಧ ಮಸೀದಿಗಳಲ್ಲಿ ಅಪರಿಚಿತ ವ್ಯಕ್ತಿಗಳು ಕಾಣಿಸಿಕೊಂಡಿದ್ದಾರೆ ಎಂದು ಶಾಸಕ ಮಹೇಶ್‌ ಟೆಂಗಿನಕಾಯಿ (Mahesh Tenginakai) ಹೇಳಿದ್ದಾರೆ.

ಹುಬ್ಬಳ್ಳಿಯ ವಿವಿಧ ಮಸೀದಿಗಳಲ್ಲಿ (Mosque) ಇರುವವರು ನಮ್ಮ ದೇಶದ ವ್ಯಕ್ತಿಗಳಂತೆ ಕಾಣುತ್ತಿಲ್ಲ. ಇದನ್ನು ನಾನು ಹೇಳುತ್ತಿಲ್ಲ. ಮುಸ್ಲಿಂ ಮುಖಂಡರೇ ನನ್ನ ಬಳಿ ಹೇಳಿ ಏನಾದರೂ ಆಗಬಹುದು ಎಂಬ ಅಂತಂಕವನ್ನು ಹೊರಹಾಕಿದ್ದಾರೆ ಎಂದು ತಿಳಿಸಿದರು.

ಈ ಬಗ್ಗೆ ಗೃಹ ಇಲಾಖೆಗೆ ಮಾಹಿತಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹುಬ್ಬಳ್ಳಿ ಬಹಳಷ್ಟು ಸೂಕ್ಷ್ಮ ಪ್ರದೇಶದ ಮುಂದೆ ಏನಾದರೂ ಅನಾಹುತ ಆದರೆ ಅದಕ್ಕೆ ಗೃಹ ಇಲಾಖೆಯೇ ಕಾರಣ ಎಂದರು.

ಇಲ್ಲಿನ ಅಧಿಕಾರಿಗಳು ಅತ್ಯುತ್ತಮ ಕಾರ್ಯ ಮಾಡತ್ತಾರೆ.ಆದರೆ ಸರ್ಕಾರ ಅವರ ಕೈ ಕಟ್ಟಿಹಾಕಿದ್ದಾರೆ ಅಂತ ಶಾಸಕ ಮಹೇಶ್ ಟೆಂಗಿನಕಾಯಿ ಸಹ ಬೆಲ್ಲದ ಆರೋಪಕ್ಕೆ ಧ್ವನಿಗೂಡಿಸಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!