ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆ; ಮಣಿಪಾಲದ ರಸ್ತೆ ಮಧ್ಯೆ ಕಲ್ಲುಗಳ ರಾಶಿ

Picture of Savistara

Savistara

Bureau Report

ಉಡುಪಿ: ಜಿಲ್ಲೆಯಾದ್ಯಂತ ಮಂಗಳವಾರ (ಮೇ.20) ಸುರಿದ ಭಾರಿ ಮಳೆಗೆ ನಗರದ ವಿವಿಧೆಡೆ ಕೃತಕ ನೆರೆ ಉಂಟಾಗಿದೆ.ಧಾರಾಕಾರ ಮಳೆಯಿಂದಾಗಿ ಉಡುಪಿಯ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತ ಉಂಟಾಗಿದೆ.ಸಗ್ರಿಯಲ್ಲಿ ತೋಡು ಕುಸಿತ, ದೊಡ್ಡಣಗುಡ್ಡೆಯಲ್ಲಿ ಮರ ಬಿದ್ದ ಪರಿಣಾಮ ವಿವಿಧೆಡೆ ಸಂಚಾರದಲ್ಲಿ ವ್ಯತ್ಯಯ ಕಂಡು ಬಂತು.

ಮಣಿಪಾಲದಲ್ಲಿ ಕಿತ್ತು ಬಂದ ತೋಡು:

ಮಣಿಪಾಲದ ಐನಾಕ್ಸ್ ಬಳಿ ತೋಡು ಕಿತ್ತುಹೋದ ಪರಿಣಾಮ ಕಲ್ಲುಗಳು ರಸ್ತೆಗೆ ಬಂದಿದ್ದು, ಹಲವು ಹೊತ್ತು ವಾಹನ ದಟ್ಟನೆ ಕಂಡುಬಂತು. ಅನಂತರ ಸ್ಥಳೀಯರ ಸಹಕಾರದಿಂದ ತೆರವುಗೊಳಿಸಲಾಯಿತು. ಜೆಸಿಬಿ ಮೂಲಕ ರಸ್ತೆ ಮಧ್ಯೆ ಬಿದ್ದಿರುವ ಕಲ್ಲುಗಳನ್ನು ತೆರವುಗೊಳಿಸಲಾಗಿದೆ.

ನೀರು ನುಗ್ಗಿದ ಪರಿಣಾಮ ಕೆಲ ಅಂಗಡಿಗಳನ್ನು ಬಂದ್ ಮಾಡಲಾಗಿದೆ.

ಮಣಿಪಾಲದ ಮಳೆಯ ಪ್ರದೇಶಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!