ಸುಳ್ಯದ ಬಂಗ್ಲೆಗುಡ್ಡೆಯಲ್ಲಿ ನೂತನವಾಗಿ ನಿರ್ಮಿಸಿದ ಜೇನು ಸೊಸೈಟಿ ಆಧುನಿಕ ಸಂಸ್ಕರಣಾ ಘಟಕ ಮತ್ತು ಜೇನು ಚಾಕಲೇಟ್ ಕಟ್ಟಡ ಮೇ.23ರಂದು ಲೋಕಾರ್ಪಣೆ

Picture of Savistara

Savistara

Bureau Report

ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು, ಸುಳ್ಯದ ಬಂಗ್ಲೆಗುಡ್ಡೆಯಲ್ಲಿ ನಿರ್ಮಿಸಿರುವ ನೂತನ ಕಟ್ಟಡ ಮತ್ತು ಆಧುನಿಕ ಸಂಸ್ಕರಣಾ ಘಟಕ ಹಾಗೂ ಜೇನು ಚಾಕೋಲೆಟ್ ನ ಲೋಕಾರ್ಪಣಾ ಸಮಾರಂಭವು ಮೇ.23 ರಂದು ಸುಳ್ಯದ ಶಾಸ್ತ್ರೀ ವೃತ್ತದಲ್ಲಿರುವ ಅಮೃತ ಭವನದಲ್ಲಿ ನಡೆಯಲಿದೆ. ಕೇಂದ್ರ ಸರಕಾರದ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆಯವರು ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.ಕೃಷಿ ಸಚಿವ ಎನ್‌.ಚೆಲುವರಾಯ ಸ್ವಾಮಿ ಸಂಸ್ಕರಣಾ ಘಟಕವನ್ನು ಉದ್ಘಾಟಿಸಲಿದ್ದಾರೆ. ಸಹಕಾರ ರತ್ನ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್‌.ರಾಜೇಂದ್ರ ಕುಮಾರ್ ಜೇನು ಚಾಕಲೇಟ್ ಲೋಕಾರ್ಪಣೆ ಮಾಡಲಿದ್ದಾರೆ.ಸಂಸದ ಕ್ಯಾ.ಬ್ರಿಜೇಶ್ ಚೌಟ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಶಾಸಕಿ ಕು.ಭಾಗೀರಥಿ ಮುರುಳ್ಯ ನಾಮಫಲಕ ಅನಾವರಣ ಮಾಡಲಿದ್ದಾರೆ. ಸಹಕಾರ ರತ್ನ, ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇದರ ಅಧ್ಯಕ್ಷ ಚಂದ್ರ ಕೋಲ್ಟಾರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೈಸೂರು ಪ್ರಾಂತ ಸಹಕಾರ ಸಂಘಗಳ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ನೀರಬಿದಿರೆ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ.ಎಂ.ಮುಸ್ತಾಫ ಉಪಸ್ಥಿತರಿರುವರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!