ಕನ್ನಡಿಗ, ಹಿರಿಯ ಐಪಿಎಸ್ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ( ಡಿಜಿ ಹಾಗೂ ಐಜಿಪಿ) ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಮೇ 21ರಂದು ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿರುವ ಡಾ.ಅಲೋಕ್‌ಮೋಹನ್ ಅವರು ಸೇವೆಯಿಂದ ನಿವೃತ್ತರಾಗಲಿದ್ದು, ಈ ಸ್ಥಾನಕ್ಕೆ ಕನ್ನಡಿಗ ಐಪಿಎಸ್ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ನೇಮಕ ಮಾಡಲಾಗಿದೆ.1966ರ ಜೂನ್ 25ರಂದು ಬೆಂಗಳೂರು ಸಮೀಪದ ಪಟ್ಟಣದಲ್ಲಿ ಜನಿಸಿದ ಡಾ.ಎಂ.ಎ.ಸಲೀಂ ಅವರು, 1989ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 1993ರಲ್ಲಿ ಉಸ್ಮಾನಿಯಾ ವಿಶ್ವವಿದ್ಯಾನಿಲಯದಲ್ಲಿ ಪೊಲೀಸ್ ನಿರ್ವಹಣೆ ಕುರಿತು ಸ್ನಾತಕೋತ್ತರ ಪದವಿ ಪಡೆದ ಅವರು 2010ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಟ್ರಾಫಿಕ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.
ರಾಜ್ಯ ಪೊಲೀಸ್ ನೂತನ ಮಹಾನಿರ್ದೇಶಕರಾಗಿ ಡಾ. ಎಂ.ಎ ಸಲೀಂ ನೇಮಕ
Savistara
Bureau Report
[t4b-ticker]












































