ಶಾಲಾ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ನಿಗದಿ

Picture of Savistara

Savistara

Bureau Report

ಮಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲು ಪೂರ್ವಸಿದ್ಧತೆಗಾಗಿ ಮೇ 29ರಂದು ಶಾಲೆ ಆರಂಭಿಸಲು ಸೂಚಿಸಲಾಗಿದೆ. ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿ ನಿಗದಿಪಡಿಸಲಾಗಿದೆ. ರಾಜ್ಯದ ಎಲ್ಲ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆ ಅನುಷ್ಠಾನಗೊಳಿಸಲಾಗುವುದು. ಇದಕ್ಕೆ ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿ ನಿಗದಿಪಡಿಸಲಾಗಿದೆ. ಇದನ್ನು ರಾಜ್ಯ ಪಠ್ಯಕ್ರಮದ ಎಲ್ಲಶಾಲೆಗಳಲ್ಲಿ ಅನುಷ್ಠಾನಗೊಳಿಸಲು ತಿಳಿಸಲಾಗಿದೆ.

ಶಾಲಾ ಕರ್ತವ್ಯದ ದಿನಗಳು:

ಮೊದಲನೇ ಅವಧಿ ಮೇ 29ರಿಂದ ಸೆ.19ರವರೆಗೆ, ಎರಡನೇ ಅವಧಿ ಅ .8ರಿಂದ 2026ರ ಏ .10ರವರೆಗೆ .

ರಜಾದಿನಗಳು: ದಸರಾ ರಜೆ ಸೆ.20ರಿಂದ ಅ.7ರವರೆಗೆ ಹಾಗೂ ಬೇಸಿಗೆ ರಜೆ 2026ರ ಏ.11ರಿಂದ ಮೇ 28ರವರೆಗೆ ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!