ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೋವಿಡ್: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

Picture of Savistara

Savistara

Bureau Report

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ವೈರಸ್ (Coronavirus) ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಆರೋಗ್ಯ ಇಲಾಖೆ ಹೊಸದಾಗಿ ಕೋವಿಡ್-19 ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಒಟ್ಟು 35 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದರೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರಿಗೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ 20 ದಿನಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಏಕಾಏಕಿ ಹೆಚ್ಚಳ ಕಂಡುಬಂದಿದೆ. ಹೀಗಾಗಿ ಮಕ್ಕಳು, ವೃದ್ಧರು ಹಾಗೂ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರು ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ವಹಿಸಿಕೊಳ್ಳಬೇಕು ಎಂದು ಇಲಾಖೆ ಸಲಹೆ ನೀಡಿದೆ. 2025 ರಲ್ಲಿ ಈವರೆಗೆ ಕೋವಿಡ್ ಸಂಬಂಧಿತ ಸಾವುಗಳು ವರದಿಯಾಗಿಲ್ಲ. ಆದರೂ, ಸೋಂಕು ಮತ್ತಷ್ಟು ಹರಡುವುದನ್ನು ತಡೆಯಲು ಎಚ್ಚರಿಕೆ ವಹಿಸಬೇಕಾದ್ದುಅಗತ್ಯ ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ಗರ್ಭಿಣಿಯರು, ಮಕ್ಕಳು, ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಮತ್ತು ರೋಗನಿರೋಧಕ ಶಕ್ತಿ ಕಡಿಮೆ ಇರುವವರು ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಫೇಸ್ ಮಾಸ್ಕ್ ಧರಿಸಿ ಓಡಾಡಲು ಸೂಚನೆ ನೀಡಲಾಗಿದೆ. ಸಾರ್ವಜನಿಕರು ಕೈಗಳ ನೈರ್ಮಲ್ಯವನ್ನು ಕಾಪಾಡಿಕೊಳ್ಳಲು ಮತ್ತು ನಿಯಮಿತವಾಗಿ ಹ್ಯಾಂಡ್ ಸ್ಯಾನಿಟೈಸರ್‌ಗಳನ್ನು ಬಳಸಲು ಸಲಹೆ ನೀಡಲಾಗಿದೆ. ತೀವ್ರ ಉಸಿರಾಟದ ಕಾಯಿಲೆಯ ಲಕ್ಷಣಗಳನ್ನು ಹೊಂದಿರುವವರು ಸಕಾಲಿಕವಾಗಿ ಚಿಕಿತ್ಸೆಯನ್ನು ಪಡೆಯಬೇಕು. ಸಂಭಾವ್ಯ ಅಪಾಯ ತಡೆಗಟ್ಟಲು ಕೋವಿಡ್ -19 ಪರೀಕ್ಷೆಯನ್ನು ತಕ್ಷಣವೇ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಒಂಬತ್ತು ತಿಂಗಳ ಮಗುವಿಗೆ ಕೋವಿಡ್ -19 ಸೋಂಕು ತಗುಲಿರುವುದು ಶುಕ್ರವಾರ ದೃಢಪಟ್ಟಿತ್ತು. ಆರೋಗ್ಯ ಇಲಾಖೆ ಅಧಿಕಾರಿಗಳು ಕೂಡ ಇದನ್ನು ದೃಢಪಡಿಸಿದ್ದಾರೆ. ಶಿಶುವಿಗೆ ಸೋಂಕು ತಗುಲಿರುವುದು ಮೇ 22 ರಂದು ರಾಪಿಡ್ ಆಂಟಿಜೆನ್ ಪರೀಕ್ಷೆ (ಆರ್‌ಎಟಿ) ನಡೆಸಿದಾಗ ದೃಢಪಟ್ಟಿದೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಶುಕ್ರವಾರ ದೃಢಪಡಿಸಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!