ಪಕ್ಷ ವಿರೋಧಿ ಚಟುವಟಿಕೆ : ಬಿಜೆಪಿಯಿಂದ ಶಾಸಕ ಶಿವರಾಮ್ ಹೆಬ್ಬಾರ್ ಮತ್ತು ಎಸ್.ಟಿ ಸೋಮಶೇಖ‌ರ್ ಉಚ್ಚಾಟನೆ

Picture of Savistara

Savistara

Bureau Report

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಶಾಸಕರಾದ ಎಸ್‌.ಟಿ. ಸೋಮಶೇಖ‌ರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ಬಿಜೆಪಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದೆ.

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖ‌ರ್ ಹಾಗೂ ಶಿವರಾಮ್ ಹೆಬ್ಬಾ‌ರ್ ಅವರನ್ನು ಬಿಜೆಪಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದೆ.

ಈ ಇಬ್ಬರು ನಾಯಕರು ಇತ್ತೀಚಿಗೆ ಕಾಂಗ್ರೆಸ್ ನಾಯಕರ ಜೊತೆ ಗುರುತಿಸಿಕೊಂಡಿದ್ದು ಜೊತೆಗೆ ಬಿಜೆಪಿ ಪಕ್ಷದ ವಿರುದ್ಧವೇ ಹೇಳಿಕೆಗಳನ್ನು ನೀಡಿದ್ದರು ಇದರಿಂದ ಬಿಜೆಪಿ ನಾಯಕರು ಈ ಇಬ್ಬರು ನಾಯಕರನ್ನು ಪಕ್ಷದಿಂದ ಉಚ್ಚಾಟನೆ ಮಾಡುವಂತೆ ಆಗ್ರಹಿಸಿದ್ದರು.

ಅದರಂತೆ ಬೆಂಗಳೂರಿನ ಯಶವಂತಪುರದ ಕ್ಷೇತ್ರದ ಶಾಸಕ ಎಸ್. ಟಿ ಸೋಮಶೇಖರ್ ಮತ್ತು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ.

ಶಿಸ್ತು ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಎರಡು ತಿಂಗಳ ಹಿಂದೆ ಬಿಜೆಪಿ ಶೋಕಾಸ್ ನೋಟಿಸ್ ನೀಡಿತ್ತು. ಆದರೆ ಶೋಕಾಸ್ ನೋಟಿಸ್‌ಗೆ ಸರಿಯಾದ ಉತ್ತರ ನೀಡದ ಕಾರಣ ಇಬ್ಬರನ್ನೂ ಉಚ್ಚಾಟಿಸಿ ಆದೇಶ ಹೊರಡಿಸಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!