ಮಣಿಪುರದಲ್ಲಿ ಸರ್ಕಾರ ರಚನೆಗೆ ಬಿಜೆಪಿ ಕಸರತ್ತು – 44 ಶಾಸಕರ ಬೆಂಬಲವಿದೆ ಎಂದ ಎನ್‌ಡಿಎ

Picture of Savistara

Savistara

Bureau Report

ಇಂಪಾಲ್: ಮಣಿಪುರದಲ್ಲಿ (Manipur) ಹೊಸ ಸರ್ಕಾರ ರಚಿಸಲು 44 ಶಾಸಕರ ಬೆಂಬಲ ಇದೆ ಎಂದು ಬಿಜೆಪಿ ಶಾಸಕ ಥೋಕ್ಚೋಮ್ ರಾಧೇಶ್ಯಾಮ್ ಸಿಂಗ್ ತಿಳಿಸಿದ್ದಾರೆ.

ಥೋಕ್ಚೋಮ್ ರಾಧೇಶ್ಯಾಮ್ ಸಿಂಗ್ (Thockchom Radheshyam Singh) ಸೇರಿದಂತೆ 10 ಶಾಸಕರು ಇಂದು ರಾಜಭವನಕ್ಕೆ ಭೇಟಿ ನೀಡಿ, ಸರ್ಕಾರ ರಚನೆ ಕುರಿತು ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ (Ajay Kumar Bhalla) ಅವರೊಂದಿಗೆ ಚರ್ಚಿಸಿದರು.

ಬಳಿಕ ಮಾತನಾಡಿದ ರಾಧೇಶ್ಯಾಮ್, ಜನರ ಇಚ್ಛೆಯಂತೆ ಹೊಸ ಸರ್ಕಾರ ರಚಿಸಲು ಬಿಜೆಪಿ ಸಿದ್ಧವಿದೆ. ಇದಕ್ಕೆ 44 ಶಾಸಕರ ಬೆಂಬಲ ಇದೆ. ನಾವು ಇದನ್ನು ರಾಜ್ಯಪಾಲರಿಗೆ ತಿಳಿಸಿದ್ದೇವೆ. ಸರ್ಕಾರ ರಚನೆಯ ಸಮಸ್ಯೆಗೆ ಯಾವ ಪರಿಹಾರಗಳಿವೆ ಎಂಬುದರ ಕುರಿತು ನಾವು ಚರ್ಚಿಸಿದ್ದೇವೆ. ರಾಜ್ಯದ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲರು ತಿಳಿಸಿದ್ದಾರೆ ಎಂದು ಹೇಳಿದರು.

ಸರ್ಕಾರ ರಚನೆಗೆ ಹಕ್ಕು ಮಂಡಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಕೇಂದ್ರ ನಾಯಕತ್ವ ನಿರ್ಧಾರ ತೆಗೆದುಕೊಳ್ಳಲಿದೆ. ವಿಧಾನಸಭಾಧ್ಯಕ್ಷ ಸತ್ಯಬ್ರತಾ ಅವರು 44 ಶಾಸಕರನ್ನು ಒಟ್ಟಿಗೆ ಕೂರಿಸಿ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಸರ್ಕಾರ ರಚನೆಗೆ ಯಾರೂ ವಿರೋಧ ವ್ಯಕ್ತಪಡಿಸಿಲ್ಲ ಎಂದರು.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!