ಕೊಲ್ಲೂರಿನ ಸೌಪರ್ಣಿಕ ನದಿ ನೀರಿನ ಮಟ್ಟ ಏರಿಕೆ, ಸ್ನಾನಘಟ್ಟಕ್ಕೆ ಇಳಿಯದಂತೆ ಸೂಚನೆ

Picture of Savistara

Savistara

Bureau Report

ಕೊಲ್ಲೂರು: ಉಡುಪಿ, ದ.ಕ ಜಿಲ್ಲೆಯಾದ್ಯಂತ ಎಡೆಬಿಡದೆ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಕೊಲ್ಲೂರಿನ ಸುತ್ತಮುತ್ತ ಘಾಟಿ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಸೌಪರ್ಣಿಕ ನದಿಯಲ್ಲಿ ನೀರಿನ ಮಟ್ಟ ಏರುತ್ತಿದೆ.ದಾಖಲೆ ಪ್ರಮಾಣದ ಮಳೆಯಿಂದಾಗಿ ಈ ಭಾಗದ ಅನೇಕ ಕಡೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ನದಿಯಲ್ಲೂ ಕೂಡಾ ನೀರಿನ ಮಟ್ಟ ಹೆಚ್ಚಾಗಿದ್ದು ಸ್ನಾನಘಟ್ಟಕ್ಕೆ ಭಕ್ತರು ಇಳಿಯುವಂತಿಲ್ಲ ಎಂದು ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ತಿಳಿಸಿದ್ದಾರೆ.ಧಾರಾಕಾರ ಮಳೆಯ ನಡುವೆ ಕೂಡಾ ಭಕ್ತಾದಿಗಳು ದೇಗುಲಕ್ಕೆ ಅಧಿಕ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!