ಮಾಣಿ, ಉಪ್ಪಿನಂಗಡಿ ಅಂಡ‌ರ್ ಪಾಸ್ – ಇಂದಿನಿಂದ ವಾಹನ ಸಂಚಾರಕ್ಕೆ ಮುಕ್ತ

Picture of Savistara

Savistara

Bureau Report

ಮಾಣಿ: ಇಂದಿನಿಂದ (ಮೇ 29) ಮಾಣಿ ಬಳಿಯ ವೆಹಿಕಲ್ ಅಂಡರ್ ಪಾಸ್(ವಿಯುಪಿ) ಹಾಗೂ ಉಪ್ಪಿನಂಗಡಿ ಬಳಿಯ ವೆಹಿಕಲ್ ಅಂಡ‌ರ್ ಪಾಸ್ ದ್ವಿ ಪಥವು ವಾಹನಗಳ ಸಂಚಾರಕ್ಕೆ ಮುಕ್ತಗೊಳ್ಳಲಿದೆ.

ಜೂ.2ರಿಂದ ಕಲ್ಲಡ್ಕ ಪೇಟೆಯಲ್ಲಿರುವ ಮೇಲುರಸ್ತೆಯಲ್ಲಿ ಎಡಭಾಗವನ್ನು ವಾಹನಗಳ ಸಂಚಾರಕ್ಕೆ ತೆರವುಗೊಳಿಸಲಾಗುತ್ತದೆ. ಅಡ್ಡಹೊಳೆಯಿಂದ ಪೆರಿಯಶಾಂತಿವರೆಗಿನ 15.13 ಕಿ.ಮೀ.ಗಳ ಪೈಕಿ 14.4 ಕಿ.ಮೀ.ಗಳ ಚತುಷ್ಪಥದ ಕಾಮಗಾರಿ ಪೂರ್ಣಗೊಂಡಿದೆ. ಪೆರಿಯಶಾಂತಿಯಿಂದ ಬಂಟ್ವಾಳದವರೆಗಿನ 48.48 ಕಿ.ಮೀ.ಗಳ ಪೈಕಿ 41.52 ಕಿ.ಮೀ.ಗಳ ಚತುಷ್ಪಥ ಕಾಮಗಾರಿ ಪೂರ್ಣಗೊಂಡಿದೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ ರೋಡ್-ಅಡ್ಡಹೊಳೆ ಚತುಷ್ಪಥ ಕಾಮಗಾರಿ ಅಂತಿಮ ಹಂತದ ಪ್ರಗತಿಯಲ್ಲಿರುವ ಕಾರಣ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಫೈ ಓವ‌ರ್ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆಯನ್ನು ತೆರವುಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡಿರುವುದಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!