ಅರುಣ್ ಪುತ್ತಿಲರಿಗೆ ಕಲ್ಬುರ್ಗಿಗೆ ಗಡಿಪಾರು ವಿಚಾರಣೆಗೆ ಹಾಜರಾಗಲು ನೋಟಿಸ್

Picture of Savistara

Savistara

Bureau Report

ಮುಂಡೂರು ಗ್ರಾಮ ಪುತ್ತಿಲ ಮನೆ ನಿವಾಸಿ ಅರುಣ್ ಕುಮಾ‌ರ್ ಪುತ್ತಿಲ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್‌ ಪೊಲೀಸ್‌ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ಕಂದಾಯ ಇಲಾಖೆ ಸಹಾಯಕ ಆಯುಕ್ತರು ಜೂ.6ರಂದು ವಿಚಾರಣೆಯನ್ನು ನಿಗಧಿಪಡಿಸಿದ್ದಾರೆ.

ಪುತ್ತೂರು: ಇಲ್ಲಿನ ಮುಂಡೂರು ಗ್ರಾಮ ಪುತ್ತಿಲ ಮನೆ ನಿವಾಸಿ ಅರುಣ್ ಕುಮಾರ್ ಪುತ್ತಿಲ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ಕಂದಾಯ ಇಲಾಖೆ ಸಹಾಯಕ ಆಯುಕ್ತರು ಜೂ.6ರಂದು ವಿಚಾರಣೆಯನ್ನು ನಿಗಧಿಪಡಿಸಿದ್ದಾರೆ. ಈ ವಿಚಾರಣೆಗೆ ಅರುಣ್ ಕುಮಾ‌ರ್ ಪುತ್ತಿಲ ಅವರು ತಪ್ಪದೇ ಹಾಜರಾಗುವಂತೆ ಸೂಚಿಸಲಾಗಿದೆ.

ಈ ಪ್ರಕರಣದಲ್ಲಿ ಸ್ವತಃ ಅರುಣ್ ಕುಮಾರ್ ಪುತ್ತಿಲ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ತಿಳಿಸಲಾಗಿದೆ.

ಒಂದುವೇಳೆ ಅರುಣ್ ಕುಮಾರ್ ಪುತ್ತಿಲ ಅವರು ವಿಚಾರಣೆಗೆ ಹಾಜರಾಗದಿದ್ದರೇ ಈ ಪ್ರಕರಣದಲ್ಲಿ ಅವರಿಗೆ ಆಸಕ್ತಿ ಇಲ್ಲವೇಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ರಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಂದಾಯ ಇಲಾಖೆಯ ಸಹಾಯಕ ಆಯುಕ್ತರು ತಿಳಿಸಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!