ವಿರಾಟ್ ಫೈನಲ್‌ ಪಂದ್ಯಕ್ಕೆ ಸಾಕ್ಷಿಯಾಗಲಿರುವ ಆರ್‌ಸಿಬಿಯ ಇಬ್ಬರು ದಿಗ್ಗಜರು

Picture of Savistara

Savistara

Bureau Report

ಅಹಮದಾಬಾದ್‌: 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಇಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿವೆ.

ಕಳೆದ 18 ವರ್ಷಗಳಿಂದ ಆರ್‌ಸಿಬಿ ತಂಡವನ್ನು ವಿರಾಟ್ ಕೊಹ್ಲಿ ಪ್ರತಿನಿಧಿಸುತ್ತಿದ್ದಾರೆ. ಆರ್‌ಸಿಬಿಯ ಹಲವು ಏಳು-ಬೀಳುಗಳನ್ನು ಕಂಡಿದ್ದಾರೆ. ಮೂರು ಬಾರಿ ರನ್ನರ್-ಅಪ್ ಆಗಿದ್ದು, ನಾಲ್ಕನೇ ಸಲ ಗುರಿ ಮುಟ್ಟು ನಿರೀಕ್ಷೆಯಲ್ಲಿದ್ದಾರೆ.ಈ ಫೈನಲ್ ಪಂದ್ಯಕ್ಕೆ ಆರ್‌ಸಿಬಿಯ ಇಬ್ಬರು ದಿಗ್ಗಜರು ಸಾಕ್ಷಿಯಾಗಲಿದ್ದಾರೆ. ಅವರೇ ವೆಸ್‌ಇಂಡೀಸ್‌ನ ಕ್ರಿಸ್ ಗೇಲ್ ಹಾಗೂ ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್.ವಿರಾಟ್ ಕೊಹ್ಲಿ ಮೂಲಕ ತಮಗೆ ಪೂರ್ಣಗೊಳಿಸಲು ಸಾಧ್ಯವಾಗದ ಕನಸನ್ನು ಗೇಲ್ ಹಾಗೂ ವಿಲಿಯರ್ಸ್ ನನಸಾಗಿಸುವ ಇರಾದೆಯಲ್ಲಿದ್ದಾರೆ.

2016ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್‌ಸಿಬಿ ಫೈನಲ್ ತಲುಪಿದಾಗ ಗೇಲ್ ಹಾಗೂ ಡಿವಿಲಿಯರ್ಸ್ ತಂಡದ ಸದಸ್ಯರಾಗಿದ್ದರು.ಬಳಿಕ ಕ್ರಿಸ್ ಗೇಲ್ ಹಾಗೂ ಡಿವಿಲಿಯರ್ಸ್ ಕೊಡುಗೆಯನ್ನು ಗಮನದಲ್ಲಿಟ್ಟುಕೊಂಡು ‘ಆರ್‌ಸಿಬಿ ಹಾಲ್ ಆಫ್ ಫೇಮ್’ ಗೌರವ ಸಲ್ಲಿಸಲಾಗಿತ್ತು.ಇಂದಿನ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಅಥವಾ ಪಂಜಾಬ್ ಪೈಕಿ ಯಾವ ತಂಡ ಗೆದ್ದರೂ ನೂತನ ಇತಿಹಾಸ ಸೃಷ್ಟಿಯಾಗಲಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!