ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸಮಿತಿ ನೇಮಕಾತಿ ಕುರಿತು ರಿಟ್: ತಡೆಯಾಜ್ಞೆ ನೀಡದೆ ವಿಚಾರಣೆ ಮುಂದೂಡಿದ ಮಾನ್ಯ ಹೈಕೋರ್ಟ್

Picture of Savistara

Savistara

Bureau Report

ಕುಕ್ಕೆ ಸುಬ್ರಹ್ಮಣ್ಯ, ಜೂನ್ 4: ಪ್ರಸಿದ್ಧ ಧಾರ್ಮಿಕ ತೀರ್ಥಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೇಮಕಾತಿ ವಿಚಾರವಾಗಿ ಜೂನ್ 3ರಂದು ನಡೆದ ಹೈಕೋರ್ಟ್ ವಿಚಾರಣೆಯಲ್ಲಿ ನ್ಯಾಯಾಲಯವು ತಡೆಯಾಜ್ಞೆ ನೀಡದೆ ವಿಚಾರಣೆಯನ್ನು ಮುಂದೂಡಿದೆ.ಇತ್ತೀಚೆಗೆ ಕರ್ನಾಟಕ ಸರ್ಕಾರವು ಒಟ್ಟು 9 ಸದಸ್ಯರ ಸಮಿತಿಯನ್ನು ರಚಿಸಿ, ಅದರಲ್ಲಿ ಅಧ್ಯಕ್ಷ ಹಾಗೂ ಇತರ ಸದಸ್ಯರನ್ನು ನೇಮಕಮಾಡಿದ್ದು, ಅವರು ಈಗಾಗಲೇ ಅಧಿಕಾರ ಸ್ವೀಕರಿಸಿದ್ದಾರೆ. ಈ ನೇಮಕಾತಿಯನ್ನು ಪ್ರಶ್ನಿಸುತ್ತಾ ಆಕಾಶ್ ಎಂಬುವವರು ಹೈಕೋರ್ಟ್‍ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಸಮಿತಿಯ ರಚನೆಯನ್ನು ತಡೆಹಿಡಿಯುವಂತೆ ಹಾಗೂ ಇತ್ತೀಚೆಗೆ ರಚಿಸಲಾದ ಸಮಿತಿಯನ್ನು ವಜಾಗೊಳಿಸಲು ಮನವಿ ಮಾಡಿದ್ದರು.ಈ ಅರ್ಜಿ ಕುರಿತು ಹೈಕೋರ್ಟ್‌ನಲ್ಲಿ ಇದುವರೆಗೆ ನಾಲ್ಕು ಬಾರಿ ವಿಚಾರಣೆ ನಡೆದಿದ್ದು, ಪ್ರತಿಬಾರಿ ವಿಚಾರಣೆ ಮುಂದೂಡಲಾಗಿದೆ. ಜೂನ್ 3ರಂದು ನಡೆದ ಕಲಾಪದಲ್ಲಿಯೂ ನ್ಯಾಯಾಲಯ ತಡೆಯಾಜ್ಞೆ ನೀಡದೆ ವಿಚಾರಣೆಯನ್ನು ಮುಂದಿನ ದಿನಕ್ಕೆ ಮುಂದೂಡಿದೆ.ಈ ಮೂಲಕ ಸಮಿತಿಯ ಅಸ್ತಿತ್ವ ಹಾಗೂ ಅದರ ಚಟುವಟಿಕೆಗಳಲ್ಲಿ ಪ್ರಸ್ತುತ ಯಾವುದೇ ಕಾನೂನು ತೊಡಕುಗಳಿಲ್ಲ ಎಂಬುದು ಸ್ಪಷ್ಟವಾಗಿದೆ.ಈ ಪ್ರಕರಣದಲ್ಲಿ ಅರ್ಜಿದಾರನಾಗಿ ಆಕಾಶ್ ಹಾಗೂ ಪ್ರತಿವಾದಿಯಾಗಿ ಕರ್ನಾಟಕ ರಾಜ್ಯ ಸರ್ಕಾರ ಪಾಲ್ಗೊಂಡಿದ್ದು, ಈ ಕುರಿತಂತೆ ಸಾರ್ವಜನಿಕ ವಲಯದಲ್ಲಿ ಹಲವಾರು ಊಹಾಪೋಹಗಳು ಹರಡುತ್ತಿದ್ದರೂ, ನ್ಯಾಯಾಲಯದ ಅಂತಿಮ ತೀರ್ಪುಗಾಗಿ ಕಾಯಬೇಕಾಗಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!