RCB ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತಕ್ಕೆ ರಾಜ್ಯ ಸರಕಾರ ನೇರ ಹೊಣೆ… ಆರ್. ಅಶೋಕ್ ಕಿಡಿ

Picture of Savistara

Savistara

Bureau Report

ಬೆಂಗಳೂರು: ಐಪಿಎಲ್ ಪಟ್ಟ ಗೆದ್ದಿರುವ ಆರ್ ಸಿಬಿತಂಡಕ್ಕೆ ಅಭಿನಂದನೆ ಸಲ್ಲಿಸಿ ಸಂಭ್ರಮಿಸಬೇಕಾದ ಘಳಿಗೆಯನ್ನ ಸೂತಕದ ಘಳಿಗೆ ಮಾಡಿರುವ ಕಾಂಗ್ರೆಸ್ ಸರ್ಕಾರದ ವಿವೇಚನಾರಹಿತ ದುರಾಡಳಿತ ಇವತ್ತು ಅಮಾಯಕ ಜೀವಗಳನ್ನ ಬಲಿ ತೆಗೆದುಕೊಂಡಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.ಐಪಿಎಲ್ ಫೈನಲ್ ಪಂದ್ಯಾವಳಿಯಲ್ಲಿ ಪಂಜಾಬ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಗೆಲುವು ಸಾಧಿಸಿದ್ದು ಅದರಂತೆ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದ್ದು ಈ ಹಿನ್ನೆಲೆಯಲ್ಲಿ ಸಾವಿರಾರು ಮಂದಿ ಆ‌ರ್ ಸಿಬಿ ಅಭಿಮಾನಿಗಳು ಕ್ರೀಡಾಂಗಣದ ಬಳಿ ಜಮಾಯಿಸಿದ್ದು ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಹನ್ನೊಂದು ಮಂದಿ ಮೃತಪಟ್ಟು ಹಲವರು ಅಸ್ವಸ್ಥಗೊಂಡು ನಗರದ ವಿವಿಧ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತು ಹೇಳಿಕೆ ನೀಡಿದ ವಿರೋಧ ಪಕ್ಷದ ನಾಯಕ ಆರ್, ಅಶೋಕ್ ‘ಕನ್ನಡಿಗರ ಜನಪ್ರಿಯ ಆರ್ ಸಿಬಿ ತಂಡ ಚಾಂಪಿಯನ್ ಪಟ್ಟ ಗೆದ್ದ ಸಾಧನೆಯಲ್ಲಿ ತಾನೂ ಒಂದಷ್ಟು ಕ್ರೆಡಿಟ್ ಪಡೆಯಬೇಕು ಎನ್ನುವ ಆತುರದಲ್ಲಿ ಸರಿಯಾದ ಪೂರ್ವಸಿದ್ಧತೆ ಇಲ್ಲದೆ, ಯೋಜನೆ ಇಲ್ಲದೆ, ಪೊಲೀಸರಿಗೆ ಕಾಲಾವಕಾಶ ಕೊಡದೆ ಅಭಿನಂದನಾ ಸಮಾರಂಭನಡೆಸಲು ರಾಜ್ಯ ಸರ್ಕಾರ ದುಂಬಾಲು ಬಿದ್ದಿದ್ದೆ ಈ ಅನಾಹುತಕ್ಕೆ ಕಾರಣ.ಐಪಿಎಲ್ ಪಂದ್ಯಾವಳಿಯ ಫೈನಲ್ ಮ್ಯಾಚ್ ನಿನ್ನೆ ರಾತ್ರಿಯಷ್ಟೇ ಮುಗಿದಿದೆ. ನಿನ್ನೆ ರಾತ್ರಿಯೆಲ್ಲಾ ನಗರದಾದ್ಯಂತ ಕಾನೂನು ಸುವ್ಯವಸ್ಥೆ ಪಾಲನೆ ಮಾಡುವಲ್ಲಿ ನಿರತರಾಗಿದ್ದ ಪೊಲೀಸ್ ಸಿಬ್ಬಂದಿಗೆ ಇವತ್ತು ಬೆಳಿಗ್ಗೆ ಏಕಾಏಕಿ ಮತ್ತೊಮ್ಮೆ ಇಷ್ಟು ದೊಡ್ಡ ಮಟ್ಟದ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸಿ ಎಂದರೆ ಅದು ಕಷ್ಟಸಾಧ್ಯ ಎನ್ನುವ ಕನಿಷ್ಠ ಪರಿಜ್ಞಾನವೂ ಇಲ್ಲದಿದ್ದಿದ್ದು ಸರ್ಕಾರದ ಸ್ಪಷ್ಟ ವೈಫಲ್ಯ ಮತ್ತು ಅದಕ್ಕಿಂತ ಹೆಚ್ಚಾಗಿ ಬೇಜವಾಬ್ದಾರಿತನ.

ಚಾಂಪಿಯನ್ ಆರ್ ಸಿಬಿ ತಂಡವನ್ನ ಸ್ವಾಗತಿಸಲು, ತಮ್ಮ ನೆಚ್ಚಿನ ಆಟಗಾರರನ್ನು ನೋಡಲು, ಅವರ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಾರೆ ಎನ್ನುವುದನ್ನ ಅಂದಾಜಿಸುವಲ್ಲಿ ಸರ್ಕಾರ ಎಡವಿದೆ ಎನ್ನುವುದು ಸ್ಪಷ್ಟವಾಗಿ ಕಾಣುತ್ತಿದೆ. ಜನ ಸಂದಣಿ ನಿರೀಕ್ಷಿಸಿ ಹೆಚ್ಚಿನ ಕಾಲಾವಕಾಶ ತೆಗೆದುಕೊಂಡು ವಾರಾಂತ್ಯದಲ್ಲಿ ಈ ಕಾರ್ಯಕ್ರಮ ಮಾಡಬಹುದಿತ್ತು ಎನ್ನಿಸುತ್ತಿದೆ.ಈ ಸಾವುಗಳಿಗೆ ರಾಜ್ಯ ಸರ್ಕಾರವೇ ಹೊಣೆ ಹೊತ್ತು ಮೃತರ ಕುಟುಂಬಗಳಿಗೆ 25 ಲಕ್ಷ ಪರಿಹಾರ ನೀಡಬೇಕು. ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಭರಿಸಬೇಕು.ಮೃತ ದುರ್ದೈವಿಗಳ ಕುಟುಂಬಗಳ ದುಃಖದಲ್ಲಿ ಇಡೀ ರಾಜ್ಯವೇ ಭಾಗಿಯಾಗಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!