ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಮಂದಿ ಮೃತ್ಯು, ಪರಿಹಾರ ಘೋಷಿಸಿದ ಸಿಎಂ

Picture of Savistara

Savistara

Bureau Report

ಘಟನೆ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸತತ 18 ವರ್ಷಗಳ ನಂತರ ಚೊಚ್ಚಲಐಪಿಎಲ್ (IPL) ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸಂಭ್ರಮಾಚರಣೆಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ 11 ಮಂದಿ ಅಭಿಮಾನಿಗಳು ಮೃತಪಟ್ಟಿದ್ದಾರೆ ಹಾಗೂ 47 ಮಂದಿ ಗಾಯಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಬುಧವಾರ ಸಂಜೆ ತುರ್ತುಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ ಇದೇ ವೇಳೆ ಸಂಭ್ರಮಾಚರಣೆ ಸಂದರ್ಭದಲ್ಲಿ ಮೃತಪಟ್ಟ ಕುಟುಂಬದವರಿಗೆ ರಾಜ್ಯ ಸರಕಾರ ವತಿಯಿಂದ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರಕಾರದಿಂದ ಭರಿಸಲಾಗುವುದು. ಈ ದುರ್ಘಟನೆ ಬಗ್ಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗುವುದು ಎಂದು ಘೋಷಿಸಿದ್ದಾರೆ. ಕಾಲ್ತುಳಿತದಲ್ಲಿ ಅಸ್ವಸ್ಥಗೊಂಡವರ ಬೆಂಗಳೂರಿನ ವೈದೇಹಿ ಸೂಪ‌ರ್ ಸ್ಪೆಷಾಲಿಟಿ ಆಸ್ಪತ್ರೆ, ಬೌರಿಂಗ್ ಆಸ್ಪತ್ರೆ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!