
ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ನಿನ್ನೆಯ ಘಟನೆ ಬಹುದೊಡ್ಡ ದುರಂತವಾಗಿ ದಾಖಲಾಗಿದೆ. ಯಾವುದೇ ಮಾನದಂಡವಿಲ್ಲದೇ ರಾಷ್ಟ್ರೀಯ ಅಥವಾ ರಾಜ್ಯದ ಮಹತ್ವದ ಹಿನ್ನೆಲೆಯಿಲ್ಲದೇ ವಿವೇಚನಾರಹಿತವಾಗಿ ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸಂದರ್ಭದ ಲಾಭ ಪಡೆಯಬಹುದು ಎಂಬ ದುರಾಸೆಯಿಂದ ರಾಜಧಾನಿಯ ಹೃದಯ ಭಾಗವನ್ನು ಸ್ಮಶಾನವನ್ನಾಗಿಸಿ ಸಂಭ್ರಮಾಚರಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ Indian National Congress – Karnataka ಸರ್ಕಾರವನ್ನು ಇಂದು ಕರ್ನಾಟಕದ ಜನತೆ ದಿನವಿಡೀ ಶಪಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನೈತಿಕತೆ ಮೆರೆದು ರಾಜಿನಾಮೆ ನೀಡಿ ಗೌರವ ಉಳಿಸಿಕೊಳ್ಳಬೇಕಾದ ಮುಖ್ಯಮಂತ್ರಿ, ಉಪ-ಮುಖ್ಯಮಂತ್ರಿ ಹಾಗೂ ಗೃಹಸಚಿವರು ಪೊಲೀಸ್ ಅಧಿಕಾರಿಗಳ ತಲೆದಂಡ ಪಡೆದುಕೊಂಡಿರುವುದು ನಿಜಕ್ಕೂ ತುಘಲಕ್ ಆಡಳಿತವನ್ನು ನೆನಪಿಸುತ್ತಿದೆ. ಯಾರು ಸತ್ತರೇನು? ಯಾರು ನೊಂದರೇನು? ನಾವು ಮಾತ್ರ ಅಧಿಕಾರದಲ್ಲಿರಬೇಕೆಂಬ ಭಂಡತನಕ್ಕೆ ಅಂಟಿ ಕುಳಿತಿರುವ ಕಾಂಗ್ರೆಸ್ ಸರ್ಕಾರವನ್ನು ಇತಿಹಾಸಕ್ಕೆ ಕಪ್ಪು ಚುಕ್ಕಿ ಅಂಟಿಸಿದ ಕಾರಣಕ್ಕೆ ಜನರೇ ಕಿತ್ತೊಗೆಯುವ ಅನಿವಾರ್ಯ ಸಂದರ್ಭ ಸಮೀಪಿಸುತ್ತಿದೆ.
ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿ
“ಕೋತಿ ತಾನು ತಿಂದು ಮೇಕೆ ಮೂತಿಗೆ ಒರೆಸಿದಂತೆ” ಮುಖ್ಯಮಂತ್ರಿ Siddaramaiah , ಉಪಮುಖ್ಯಮಂತ್ರಿ DK Shivakumar ಹಾಗೂ ಗೃಹ ಸಚಿವ DR. G Parameshwara ಅವರುಗಳು ತಪ್ಪಿಸಿಕೊಳ್ಳಲಾಗದು ತಕ್ಷಣವೇ ಮೂವರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ತಮ್ಮ ಗೌರವ ಕಾಪಾಡಿಕೊಳ್ಳಲೆಂದೂ ಬಿಜೆಪಿ ರಾಜ್ಯಾಧ್ಯಕ್ಷ ಬಿವಿವಿ ವಿಜಯೇಂದ್ರ ತಿಳಿಸಿದ್ದಾರೆ.













































